More

    ದಾವಣಗೆರೆಯಲ್ಲಿ ಚಿಂತನ ಮಂಥನ

    ಸುರಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿನ ಎಲ್ಲ ಸಮುದಾಯಗಳನ್ನು ಒಡೆಯಲು ಮುಂದಾಗಿದ್ದು, ಇದನ್ನು ತಡೆಯುವುದಕ್ಕಾಗಿ ಡಿ.೨೩ ಮತ್ತು ೨೪ರಂದು ದಾವಣಗೆರೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯಿಂದ ಚಿಂತನ ಮಂಥನ ನಡೆಯಲಿದೆ ಎಂದು ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ್ ಹೇಳಿದರು.

    ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯಿಂದ ಚಿಂತನ ಮಂಥನ ಅಧಿವೇಶನ ನಿಮಿತ್ತ ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಸಂಜೆ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯಿತರಿಗೆ ಕಾಲವಿಲ್ಲದಂತಾಗಿದೆ. ಸಮುದಾಯ ಎಲ್ಲರೊಂದಿಗೆ ಅನೋನ್ಯ ಬಾಂಧವ್ಯ ಹೊಂದಿದ್ದು, ನಮ್ಮತನ ಉಳಿಸಿಕೊಳ್ಳಲು ಅಧಿವೇಶನದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

    ಎರಡು ದಿನ ದಾವಣಗೆರೆಯಲ್ಲಿ ನಡೆಯುವ ಮಹಾಸಭಾದ ಮಹಾ ಅಧಿವೇಶನಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು ೧೦ ಲಕ್ಷ ಜನ ಆಗಮಿಸುವ ನಿರೀಕ್ಷೆಯಿದೆ. ಆದ್ದರಿಂದ ಸುರಪುರ ಮತ್ತು ಹುಣಸಗಿ ತಾಲೂಕಿನ ಸಮಾಜ ಬಾಂಧವರು ಮಹಾ ಅಧಿವೇಶನಕ್ಕೆ ಬಂದು ಮೆರಗು ತರಬೇಕು ಎಂದರು.
    ತಾಲೂಕು ವೀರಶೈವ ಲಿಂಗಾಯತ ಸಮಿತಿ ಅಧ್ಯಕ್ಷ ಹಾಗೂ ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಾ.ಸುರೇಶ ಸಜ್ಜನ್ ಮಾತನಾಡಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಕಳೆದ ೨೩ ಮಹಾ ಅಧಿವೇಶನ ನಡೆಸಿ ರಾಜ್ಯದಲ್ಲಿರುವ ವೀರಶೈವ ಲಿಂಗಾಯತರನ್ನು ಒಂದಾಗಲು ಶ್ರಮಿಸುತ್ತಿದೆ. ೨೪ನೇ ಮಹಾ ಅಧಿವೇಶನ ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.

    ಮುಖಂಡರಾದ ಮಲ್ಲಿಕಾರ್ಜುನ ರೆಡ್ಡಿ, ಜಗದೀಶ ಪಾಟೀಲ್, ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಗೌಡ ಬಾಡ್ಯಾಳ, ಕಸಾಪ ತಾಲೂಕು ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ಮಾತನಾಡಿದರು. ಮಹಾಸಭಾದ ಜಿಲ್ಲಾಧ್ಯಕ್ಷ ಸೋಮಶೇಖರ ಮಣ್ಣೂರ, ಮಾಜಿ ಉಪಾಧ್ಯಕ್ಷ ರಾಜಶೇಖರ ವಜ್ಜಲ್, ಮಹಾಸಭಾದ ಯುವ ಘಟಕದ ಅಧ್ಯಕ್ಷ ಅವಿನಾಶ ಜಗನ್ನಾಥ್, ಬಸವರಾಜ ಜಮದ್ರಖಾನಿ, ಶಿವರಾಜಪ್ಪ ಗೋಲಗೇರಿ, ಎಚ್.ಸಿ. ಪಾಟೀಲ್, ಬಾಬುಗೌಡ ಪಾಟೀಲ್ ಅಗತೀರ್ಥ, ಸೂಗುರೇಶ ವಾರದ್, ಶಿವರಾಜ ಬುದೂರ, ಮಲ್ಲಣ್ಣ ಸಾಹು ಮುಧೋಳ, ಸಿದ್ದಣಗೌಡ ಹೆಬ್ಬಾಳ ಇತರರಿದ್ದರು. ಜಗದೀಶ ಪಾಟೀಲ್ ಸ್ವಾಗತಿಸಿದರು. ಪ್ರಕಾಶ ಅಂಗಡಿ ಕನ್ನೆಳ್ಳಿ ನಿರೂಪಣೆ ಮಾಡಿ ವಂದಿಸಿದರು. ಕನ್ನಡದ ಚಕ್ರವರ್ತಿ ಅಮೋಘವರ್ಷ ನೃಪತುಂಗರ ೧೨೨೩ನೇ ಜಯಂತಿ ಆಚರಿಸಲಾಯಿತು. ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ವೆಂಕಟರೆಡ್ಡಿ ಮುದ್ನಾರ್, ಜಿಲ್ಲಾಧ್ಯಕ್ಷ ಸೋಮಶೇಖರ ಮಣ್ಣೂರ ಅವರನ್ನು ಸನ್ಮಾನಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts