ದಾವಣಗೆರೆಯಲ್ಲಿ ಸಾಮರ್ಥ್ಯ ವೃದ್ಧಿ ವಿಚಾರ ಸಂಕಿರಣ

ದಾವಣಗೆರೆ: ದಾವಣಗೆರೆಯ ಅಥಣಿ ಸ್ನಾತಕೋತ್ತರ ಕೇಂದ್ರದಲ್ಲಿ ಮಂಗಳವಾರ, ಪೈಪೋಟಿಯಲ್ಲಿ ಗುರುತಿಸಿಕೊಳ್ಳುವಿಕೆ ಮತ್ತು ಸಾಮರ್ಥ್ಯ ವೃದ್ಧಿ ಕುರಿತು ವಿವಿ ಮಟ್ಟದ ವಿಚಾರ ಸಂಕಿರಣ ನಡೆಯಿತು. ವಿವಿಧ ಕಾಲೇಜು ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ವಿಚಾರ ವಿನಿಮಯ ಮಾಡಿಕೊಂಡರು.

ಕಾರ್ಯಕ್ರಮ ಉದ್ಘಾಟಿಸಿದ ವಿವಿ ಕುಲಪತಿ ಡಾ.ಎಸ್.ವಿ. ಹಲಸೆ ಮಾತನಾಡಿ, ವಿದ್ಯಾರ್ಥಿಗಳು ಸೂಕ್ತ ತರಬೇತಿ ಪಡೆದುಕೊಂಡು ಪೈಪೋಟಿ ಎದುರಿಸಲು ಸಜ್ಜಾಗಬೇಕು. ನಮ್ಮನ್ನು ನಾವು ವಿಶ್ಲೇಷಣೆಗೆ ಒಳಪಡಿಸಬೇಕು. ಸ್ಮಾರ್ಟ್ ಕ್ಲಾಸ್, ಆನ್‌ಲೈನ್ ಕೋರ್ಸ್‌ನಂಥ ಸೌಲಭ್ಯಗಳನ್ನು ಬಳಸಿಕೊಂಡು ಬೆಳೆಯಬೇಕು ಎಂದು ಸಲಹೆ ನೀಡಿದರು.

ದಾವಣಗೆರೆ ವಿವಿಯ ವಾಣಿಜ್ಯ ಮತ್ತು ಮ್ಯಾನೇಜ್‌ಮೆಂಟ್ ವಿಭಾಗದ ಡೀನ್ ಪ್ರೊ.ಪಿ. ಲಕ್ಷ್ಮಣ ಮಾತನಾಡಿ, ಯುವಜನರು ಇಂದಿನ ಉದ್ಯೋಗ ಮಾರುಕಟ್ಟೆಯಲ್ಲಿ ಕೆಲಸ ಗಿಟ್ಟಿಸಲು ಸಜ್ಜಾಗಬೇಕು ಎಂದು ಹೇಳಿದರು. ಉದ್ಯಮಿ ಅಥಣಿ ವೀರಣ್ಣ ಅಧ್ಯಕ್ಷತೆ ವಹಿಸಿದ್ದರು.