More

    ಹೆಚ್ಚುವರಿ ಬಸ್‌ ಬಿಡಲು ರಾಜ್ಯ ಸರ್ಕಾರಕ್ಕೆ ಎಬಿವಿಪಿ ಒತ್ತಾಯ

    ದಾವಣಗೆರೆ : ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿಯಾದಾಗಿನಿಂದ ವಿದ್ಯಾರ್ಥಿಗಳ ಸಂಚಾರಕ್ಕೆ ಅಡಚಣೆಯಾಗಿದ್ದು, ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬುಧವಾರ ಪ್ರತಿಭಟನೆ ನಡೆಸಿತು.
    ಈ ಕೂಡಲೇ ಸರ್ಕಾರ ಹೆಚ್ಚುವರಿ ಬಸ್‌ಗಳನ್ನು ಬಿಡುವುದು, ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸುವ ಮೂಲಕ ಸಮಸ್ಯೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದರು.
    ಈಗಾಗಲೇ ವಿದ್ಯಾರ್ಥಿನಿಯರಿಗೆ ಉಚಿತ ಪ್ರಯಾಣ ಒದಗಿಸಲಾಗಿದೆ. ಹಾಗೆ ಮುಂದಿನ ಯೋಜನೆಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕಿದೆ.
    ವಿದ್ಯಾರ್ಥಿಗಳು ಹಳ್ಳಿಯಿಂದ ಪಟ್ಟಣದ ಕಾಲೇಜುಗಳಿಗೆ ವಿದ್ಯಾಭ್ಯಾಸಕ್ಕೆ ಬರಲು ಸರ್ಕಾರಿ ಬಸ್‌ಗಳನ್ನು ಅವಲಂಬಿಸಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಿದ್ದು, ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವ ಕಾರಣದಿಂದ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ.
    ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಇದರಿಂದ ಪಾಠ-ಪ್ರವಚನಗಳಲ್ಲೂ ಹಿಂದುಳಿಯುವಂತಾಗಿದೆ. ಪರೀಕ್ಷೆಗಳಿಗೆ ತೆರಳಲು ಕಷ್ಟವಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು. 
    ಮಂಜುನಾಥ್ ಕೊಳ್ಳೇರ, ಕೊಟ್ರೇಶ್ ನಾಗೇನಹಳ್ಳಿ, ಡಿ.ಕೆ.ನವೀನ್, ವರುಣ್, ಶಶಾಂಕ್, ರತನ್, ಮನೋಜ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts