More

    ಸ್ಕ್ಯಾನಿಂಗ್ ಕೇಂದ್ರಗಳು ಮಾರ್ಗಸೂಚಿ ಪಾಲಿಸಲಿ

    ದಾವಣಗೆರೆ : ಪ್ರಸವಪೂರ್ವ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ತಡೆ ಕಾಯ್ದೆಯಡಿ ಜಿಲ್ಲೆಯಲ್ಲಿರುವ ಎಲ್ಲ ಸ್ಕ್ಯಾನಿಂಗ್ ಕೇಂದ್ರಗಳು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಂಡು ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು ಎಂದು ಉಪ ವಿಭಾಗಾಧಿಕಾರಿ ದುರ್ಗಾಶ್ರೀ ಹೇಳಿದರು.
     ತಮ್ಮ ಕಚೇರಿಯಲ್ಲಿ ಮಂಗಳವಾರ, ಈ ಕಾಯ್ದೆಯ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು.
     ಆರೋಗ್ಯ ಸಂಸ್ಥೆಗಳು ಸರ್ಕಾರದ ಇ-ಕಲ್ಯಾಣಿ ಸಾಫ್ಟ್‌ವೇರ್‌ನಲ್ಲಿ ನೋಂದಣಿ ಮಾಡದಿರುವ ಮತ್ತು ನಿಗದಿತ ನಿಯಮ ಪಾಲನೆ ಹಾಗೂ ದಾಖಲೆಗಳನ್ನು ನಿರ್ವಹಿಸದಿರುವ ಆರೋಗ್ಯ ಸಂಸ್ಥೆಗಳ ವಿರುದ್ಧ ನೋಟಿಸ್ ಜಾರಿ ಮಾಡಬೇಕು ಎಂದು ತಿಳಿಸಿದರು.
     ಕಾಯ್ದೆಯನ್ನು ಡಯಾಗ್ನೊಸ್ಟಿಕ್ ಕೇಂದ್ರ ನೋಂದಣಿ, ನವೀಕರಣಕ್ಕೆ ಮಾತ್ರ ಬಳಕೆ ಮಾಡಿಕೊಳ್ಳದೆ, ಲಿಂಗ ಪತ್ತೆ ತಡೆಗಟ್ಟುವಲ್ಲಿ ಪರಿಣಾಮಕಾರಿಯಾಗಿ ಕಾಯ್ದೆಯನ್ನು ಅನುಷ್ಟಾನಗೊಳಿಸಲು ಪ್ರಯತ್ನಿಸಬೇಕು. ಆದ್ದರಿಂದ ಮುಂದಿನ ಸಭೆಯೊಳಗಾಗಿ ಒಂದೆರಡು ಲಿಂಗ ಪತ್ತೆ ಪರೀಕ್ಷೆ ಮಾಡುವವರ ಹಾಗೂ ಹೆಣ್ಣು ಭ್ರೂಣ ಗರ್ಭಪಾತ ಮಾಡಿಸಿರುವ ಪ್ರಕರಣಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಯಾಗಿಸಿದರೆ ಇತರರು ಎಚ್ಚೆತ್ತುಕೊಳ್ಳುತ್ತಾರೆ ಎಂದರು.
     ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಷಣ್ಮುಖಪ್ಪ, ಡಾ. ಕಾಳಪ್ಪನವರ್, ಡಾ. ರುದ್ರಸ್ವಾಮಿ, ರೇಡಿಯಾಲಜಿಸ್ಟ್ ಡಾ.ಸುಮಿತ್ರಾ ಎಲ್, ಡಾ. ಭಾರತಿ, ಸಾಮಾಜಿಕ ಕಾರ್ಯಕರ್ತ ಎಂ.ಜಿ. ಶ್ರೀಕಾಂತ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts