ರೈತರಿಗೆ ಸೇವೆ ಒದಗಿಸಲು ಕೈಜೋಡಿಸಿ

blank

ದಾವಣಗೆರೆ : ಮುಂಗಾರು ಹಂಗಾಮು ಆರಂಭವಾಗಲಿದ್ದು ಕೃಷಿ ಪರಿಕರ ಮಾರಾಟಗಾರರು ಇಲಾಖೆಯೊಂದಿಗೆ ಕೈಜೋಡಿಸಿ ರೈತರಿಗೆ ಸೇವೆ ಒದಗಿಸಬೇಕು ಎಂದು ಇಲಾಖೆಯ ಉಪ ನಿರ್ದೇಶಕ ಅಶೋಕ್ ಹೇಳಿದರು.  ನಗರದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಗುರುವಾರ, ತಾಲೂಕಿನ ಕೃಷಿ ಪರಿಕರ ಮಾರಾಟಗಾರರಿಗೆ ‘ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ, ಕೀಟನಾಶಕ ಹಾಗೂ ಬಿತ್ತನೆ ಬೀಜಗಳ ಸಮರ್ಪಕ ದಾಸ್ತಾನು ಹಾಗೂ ವಿತರಣೆ’ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.  ಕೃಷಿ ಪರಿಕರ ಮಾರಾಟಗಾರರು ಇಲಾಖೆ ಮತ್ತು ರೈತರ ನಡುವಿನ ಕೊಂಡಿಯಾಗಿದ್ದು ಉತ್ಪಾದಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಗುಣಮಟ್ಟದ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸುವ ಮೂಲಕ ಸಹಕಾರ ನೀಡಬೇಕು ಎಂದು ತಿಳಿಸಿದರು.  ಪರಿಕರ ಮಾರಾಟಗಾರರು ದಾಖಲಾತಿಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಇಲ್ಲದಿದ್ದರೆ ಕಾನೂನಾತ್ಮಕವಾಗಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ದಾಸ್ತಾನು ನಿರ್ವಹಣೆಯನ್ನು ಅಚ್ಚುಕಟ್ಟಾಗಿ ಮಾಡಬೇಕು. ಪರಿಕರಗಳನ್ನು ಅಧಿಕೃತ ಸ್ಥಳಗಳಲ್ಲೇ ಖರೀದಿಸಬೇಕು ಎಂದು ಹೇಳಿದರು.  ಕೃಷಿ ಜಾಗೃತ ದಳದ ಅಧಿಕಾರಿಗಳಾದ ಗೋವರ್ಧನ್, ಶ್ರೀನಿವಾಸುಲು, ಕೃಷಿ ಪರಿಕರ ಮಾರಾಟಗಾರರ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್, ವಾಸವಿ ಶೆಟ್ಟರ್, ಬಾಳೇಹೊಲ ಕಿರಣ್, ಸೋಮಶೇಖರ್ ಇದ್ದರು.  ಇದೇ ವೇಳೆ ಸಂಯುಕ್ತ ರಸಗೊಬ್ಬರ ಬಳಸುವ ಬಗ್ಗೆ ರೈತರಿಗೆ ಸಲಹೆ ನೀಡುವ ಕರಪತ್ರವನ್ನು ಬಿಡುಗಡೆ ಮಾಡಲಾಯಿತು.

blank
Share This Article
blank

ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ರ ನಡುವೆ ಹೃದಯಾಘಾತಗಳು ಹೆಚ್ಚಾಗಿ ಸಂಭವಿಸುತ್ತವೆ! ಯಾಕೆ ಗೊತ್ತಾ? heart attacks

heart attacks: ಪ್ರಪಂಚದಾದ್ಯಂತ ಹೃದಯಾಘಾತ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಬೆಳಿಗ್ಗೆ 6 ರಿಂದ ಮಧ್ಯಾಹ್ನ 12…

ಕಾಲುಗಳಲ್ಲಿ ರಕ್ತನಾಳಗಳು ಗೋಚರಿಸಲು ಕಾರಣ ಏನು ಗೊತ್ತೆ?: ಅಪಾಯದ ಬಗ್ಗೆ ಅರಿವಿರಲಿ | Visible Veins

Visible Veins: ನಿಮ್ಮ ಕಾಲುಗಳಲ್ಲಿ ಅಥವಾ ನಮ್ಮ ಅಕ್ಕಪಕ್ಕದವರ ಮನೆಯಲ್ಲಿನ ಕೆಲವರಿಗೆ ಈ ರಕ್ತನಾಳಗಳು ಗೋಚರಿಸಿರುವುದು…

blank