More

    ದೇವರಾಜ ಅರಸು ಜಯಂತಿಗೆ ಕಾರ್ಯಕ್ರಮ ವೈವಿಧ್ಯ

    ದಾವಣಗೆರೆ : ಹಿಂದುಳಿದ ವರ್ಗಗಳ ನೇತಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಅಂಗವಾಗಿ ವಿವಿಧ  ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ.
     ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ದೇವರಾಜ ಅರಸು ಜಯಂತಿ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ವಿವಿಧ ಇಲಾಖೆ ಅಧಿಕಾರಿಗಳಿಗೆ ಈ ಕುರಿತು ಸೂಚನೆಗಳನ್ನು ನೀಡಿದರು.
     ಆ. 20ರಂದು ಬೆಳಗ್ಗೆ 10 ಗಂಟೆಗೆ ದೇವರಾಜ ಅರಸು ಬಡಾವಣೆಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ವಿವಿಧ ಕಲಾ ತಂಡಗಳ ಮೆರವಣಿಗೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಅರಸು ಅವರು ನಾಡಿಗೆ ನೀಡಿರುವ ಕೊಡುಗೆಗಳ ಕುರಿತು ಉಪನ್ಯಾಸ ಇರಲಿದೆ ಎಂದು ತಿಳಿಸಿದರು.
     ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಮಾತನಾಡಿ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು, ಆಶ್ರಮ ಶಾಲೆಗಳು, ಖಾಸಗಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಡಿ. ದೇವರಾಜ ಅರಸು ಜನ್ಮ ದಿನವನ್ನು ಕಡ್ಡಾಯವಾಗಿ ಆಚರಿಸಬೇಕು. ಅರಸು ಪ್ರತಿಮೆ ಇರುವ ಸ್ಥಳದಲ್ಲಿ ಸುಣ್ಣ, ಬಣ್ಣ, ಸ್ವಚ್ಛತೆಯ ಬಗ್ಗೆ ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳಬೇಕು. ಪ್ರತಿಮೆ ಇರುವ ಸ್ಥಳದಲ್ಲಿ ತೋಟಗಾರಿಕೆ ಇಲಾಖೆಯವರು ಬಣ್ಣ ಬಣ್ಣದ ಅಲಂಕಾರಿಕ ಹೂವಿನ ಕುಂಡಗಳನ್ನು ಇಡಬೇಕು ಎಂದು ಸೂಚಿಸಿದರು.
     2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಸ್ನಾತಕೋತ್ತರ ಪದವಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ  ಸನ್ಮಾನಿಸಲಾಗುವುದು. ನಿಲಯದಲ್ಲಿನ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ, ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡಲಾಗುವುದು ಎಂದರು.
     ದೂಡಾ ಆಯುಕ್ತ ಬಸವನಗೌಡ ಕೊಟೂರು, ಪಾಲಿಕೆ ಆಯುಕ್ತೆ ರೇಣುಕಾ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಾಯತ್ರಿ ಹಾಗೂ ವಿವಿಧ ಸಮುದಾಯಗಳ, ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts