More

    ಜಿಲ್ಲಾದ್ಯಂತ ಆಶಾ ಕಾರ್ಯಕರ್ತೆಯರ ಮನವಿ

    ದಾವಣಗೆರೆ: ಮಾಸಿಕ 12 ಸಾವಿರ ರೂ. ಗೌರವಧನ ನಿಗಧಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಸೋಮವಾರ ಆಶಾ ಕಾರ್ಯಕರ್ತೆಯರು ಮನವಿ ಸಲ್ಲಿಸಿದರು.

    ಗ್ರಾಪಂ ಮಟ್ಟದಲ್ಲಿ ಪಿಡಿಒಗಳು, ತಾಲೂಕುಗಳಲ್ಲಿ ನಗರಸಭೆ, ಪಟ್ಟಣ ಪಂಚಾಯಿತಿ ಅಧಿಕಾರಿಗಳು, ದಾವಣಗೆರೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ಬಿ.ಜಿ.ಅಜಯಕುಮಾರ್ ಮತ್ತು ಆಯುಕ್ತ ವಿಶ್ವನಾಥ ಮುದಜ್ಜಿ ಅವರಿಗೆ ಮನವಿ ಸ್ವೀಕರಿಸಿದರು.

    ಕೋವಿಡ್ ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷತಾ ಸಾಮಗ್ರಿಗಳನ್ನು ನೀಡಬೇಕು. ಸೋಂಕಿಗೆ ಒಳಗಾದ ಆಶಾ ಕಾರ್ಯಕರ್ತೆಯರಿಗೆ ಪರಿಹಾರ, ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕೆಂದು ಒತ್ತಾಯಿಸಿದರು.

    ರಾಜ್ಯಾದ್ಯಂತ ಜುಲೈ 10ರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ, ಅನಿರ್ದಿಷ್ಟ ಹೋರಾಟ ನಡೆಸುತ್ತಿದ್ದು, ತಮ್ಮ ನ್ಯಾಯಯುತ ಬೇಡಿಕೆಗಳಿಗೆ ಸಿಎಂ ಸ್ಪಂದಿಸಬೇಕೆಂದು ಆಗ್ರಹಿಸಿದರು.

    ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರಾದ ಭಾರತಿ, ನೇತ್ರಾವತಿ, ರುಕ್ಕಮ್ಮ, ಮಂಜುಳಾ, ನಾಗರತ್ನಾ, ಪರ್ವೀನ್ ಬಾನು, ಜ್ಯೋತಿ, ರಾಜೇಶ್ವರಿ, ಭಾಗ್ಯಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts