ದಾವಣಗೆರೆ :
ಅಂಗವಿಕಲರ ಸಬಲೀಕರಣಕ್ಕೆ ಸಲ್ಲಿಸಿದ ಸೇವೆಗಾಗಿ ದಾವಣಗೆರೆಯ ಕರ್ನಾಟಕ ಹಿಮೊಫಿಲಿಯಾ ಸೊಸೈಟಿ ಅಧ್ಯಕ್ಷ ಡಾ. ಸುರೇಶ ಹನಗವಾಡಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯಲ್ಲಿ ಮಂಗಳವಾರ ನಡೆದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್, ಇಲಾಖೆಯ ಕಾರ್ಯದರ್ಶಿ ರಾಜೇಶ ಅಗರವಾಲ್ ಇದ್ದರು.