ದಾವಣಗೆರೆ : ನಗರದ ಖ್ಯಾತ ಚಿನ್ನ, ಬೆಳ್ಳಿ ವರ್ತಕ ಹಾಗೂ ಸಮಾಜ ಸೇವಕ ವಾಸುದೇವ ರಾಯ್ಕರ್ ಅವರಿಗೆ ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇತ್ತೀಚೆಗೆ ನಡೆದ ರಾಯರ ವರ್ಧಂತಿ ಮಹೋತ್ಸವ ಸಮಾರಂಭದಲ್ಲಿ ರಾಯರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ‘ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ’ ನೀಡಿ ಗೌರವಿಸಿದರು. ವಾಸುದೇವ ರಾಯ್ಕರ್ ಕಳೆದ 25 ವರ್ಷಗಳಿಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಸಲ್ಲಿಸುತ್ತಿರುವ ಸಮಾಜ ಸೇವೆ ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಸಮಾರಂಭದಲ್ಲಿ ಅದಾನಿ ಗ್ರೂಪ್‌ನ ಕಿಶೋರ್ ಆಳ್ವ, ವಿಜಯನಗರ ಜಿಲ್ಲಾಧಿಕಾರಿ ದಿವಾಕರ್ ಮತ್ತಿತರ ಗಣ್ಯರು ಇದ್ದರು.
