More

    ಲೋಕ ಅದಾಲತ್ ಜಾಗೃತಿ ಜಾಥಾ

    ದಾವಣಗೆರೆ: ಶನಿವಾರ (ಜು. 8) ಬೃಹತ್ ಲೋಕ ಅದಾಲತ್ ಹಮ್ಮಿಕೊಂಡ ಹಿನ್ನೆಲೆಯಲ್ಲಿ ಆರ್.ಎಲ್. ಕಾನೂನು ಕಾಲೇಜು ವಿದ್ಯಾರ್ಥಿಗಳಿಂದ ನಗರದಲ್ಲಿ ಶುಕ್ರವಾರ ಜಾಗೃತಿ ಜಾಥಾ ನಡೆಸಲಾಯಿತು.
     ಆರ್.ಎಲ್. ಕಾನೂನು ಕಾಲೇಜು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಕಾಲೇಜು ಆವರಣದಿಂದ ನಡೆದ ಜಾಥಾಕ್ಕೆ ಚಾಲನೆ ನೀಡಲಾಯಿತು.
     ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಜನರು ಸಣ್ಣಪುಟ್ಟ ವ್ಯಾಜ್ಯಗಳಿಗೆ ನಿತ್ಯ ನ್ಯಾಯಾಲಯಕ್ಕೆ ಅಲೆದಾಡುವುದನ್ನು ತಪ್ಪಿಸಿ ಕಡಿಮೆ ಖರ್ಚಿನಲ್ಲಿ ನ್ಯಾಯ ಒದಗಿಸಲು ಎಲ್ಲ ನ್ಯಾಯಾಲಯಗಳಲ್ಲಿ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ತಿಳಿಸಿದರು.
     ಲೋಕ ಅದಾಲತ್‌ನಲ್ಲಿ ಪ್ರಕರಣ ಬಗೆಹರಿಸಿಕೊಳ್ಳುವುದರಿಂದ ಪರಸ್ಪರ ಸೌಹಾರ್ದ ಬಾಂಧವ್ಯ ಮೂಡಲಿದೆ. ಈ ಕುರಿತು  ಸಮಾಜದಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
     ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಎಂ. ಕರೆಣ್ಣನವರ್ ಮಾತನಾಡಿ, ಉಜ್ವಲ ಭಾರತ ನಿರ್ಮಾಣ ಹಾಗೂ ಕಾನೂನು ವ್ಯವಸ್ಥೆಗೆ ಉತ್ತಮ ಕಳೆ ತರಲು ಗುರುತರ ಜವಾಬ್ದಾರಿ ಹೊಂದಿರುವ ನಾವು ಸಮಾಜಕ್ಕೆ ಒಳ್ಳೆಯ ಮಾರ್ಗದರ್ಶನ ತೋರಿಸಿ ಜನರನ್ನು ಸುಶಿಕ್ಷಿತರನ್ನಾಗಿ ಮಾಡಬೇಕಿದೆ ಎಂದರು.
     ಕಾನೂನು ಸೇವಾ ಪ್ರಾಧಿಕಾರದ ಅಡಿ ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವಾ ಸಮಿತಿಗಳು ಇದ್ದು, ನ್ಯಾಯ ಅರಸಿಕೊಂಡು ಬರುವ ಜನರಿಗೆ ಕಾನೂನು ಅರಿವು ಮತ್ತು ನೆರವು ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
     ಆರ್.ಎಲ್. ಕಾನೂನು ಕಾಲೇಜು ಪ್ರಭಾರ ಪ್ರಾಂಶುಪಾಲ ಡಾ.ಜಿ.ಎಸ್. ಯತೀಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್‌ಕುಮಾರ್, ಕಾರ್ಯದರ್ಶಿ ಎಸ್. ಬಸವರಾಜ್, ಉಪಾಧ್ಯಕ್ಷ ಜಿ.ಕೆ. ಬಸವರಾಜ್ ಗೋಪನಾಳ್, ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್, ವಕೀಲ ಆಂಜನೇಯ ಗುರೂಜಿ ಇತರರು ಭಾಗವಹಿಸಿದ್ದರು.
     ಆರ್.ಎಲ್. ಕಾನೂನು ಕಾಲೇಜಿನಿಂದ ಹೊರಟ ಜಾಥಾವು ವಿವಿಧ ಘೋಷಣೆಗಳೊಂದಿಗೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಲೋಕ ಅದಾಲತ್ ಕುರಿತು ಜಾಗೃತಿ ಮೂಡಿಸಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts