ಭಾಯಾಗಡದಲ್ಲಿ ಬಂಜಾರ ಸಂಸ್ಕೃತಿ ಅನಾವರಣ

blank

ದಾವಣಗೆರೆ :

blank

ಬಂಜಾರ ಸಮುದಾಯದ ಆರಾಧ್ಯ ದೈವ ಶ್ರೀ ಸಂತ ಸೇವಾಲಾಲ್ ಅವರ 286 ನೇ ಜಯಂತ್ಯುತ್ಸವಕ್ಕೆ ನಾಡಿನ ವಿವಿಧೆಡೆಯಿಂದ ಬಂದ ಅಪಾರ ಸಂಖ್ಯೆಯ ಭಕ್ತರು ಸಾಕ್ಷಿಯಾಗಿದ್ದು, ಸೂರಗೊಂಡನಕೊಪ್ಪದ ಪವಿತ್ರ ಭಾಯಾಗಡದಲ್ಲಿ ವರ್ಣರಂಜಿತ ಲಂಬಾಣಿ ಸಂಸ್ಕೃತಿಯ ಸೊಬಗು ಅನಾವರಣಗೊಂಡಿದೆ.

ದಾರ್ಶನಿಕ ಸೇವಾಲಾಲ್ ಅವರ ಜನ್ಮಸ್ಥಳದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಬ್ಬ ಕಳೆಗಟ್ಟಿದೆ. ಬಂಜಾರ ಪರಂಪರೆಯ ಹಾಡು, ನೃತ್ಯಗಳ ಝಲಕ್ ಆಕರ್ಷಕವಾಗಿದೆ. ಎಲ್ಲೆಲ್ಲೂ ಸಂತ ಸೇವಾಲಾಲ್ ಅವರದೇ ನಾಮಸ್ಮರಣೆ ತುಂಬಿದೆ.

ಮಾಲಾಧಾರಿಗಳು ನಾಡಿನ ವಿವಿಧೆಡೆಯಿಂದ ಪಾದಯಾತ್ರೆ ಮೂಲಕ ಆಗಮಿಸಿ ಶ್ರದ್ಧಾ ಭಕ್ತಿಯಿಂದ ಭಾಗವಹಿಸಿದ್ದಾರೆ.

ಭಕ್ತರು ಶ್ವೇತ ವಸ್ತ್ರ, ಕೇಸರಿ ಪೇಟಾ, ಹೆಗಲ ಮೇಲೊಂದು ಶಲ್ಯದೊಂದಿಗೆ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದರು. ಸಮುದಾಯದವರು ಕುಟುಂಬ ಸಮೇತರಾಗಿ ದೂರದೂರುಗಳಿಂದ ವಿವಿಧ ವಾಹನಗಳಲ್ಲಿ ಆಗಮಿಸಿದ್ದರು.

ಉತ್ಸವದಲ್ಲಿ ಮಠಾಧೀಶರು, ಜನಪ್ರತಿನಿಧಿಗಳು, ಅಧಿಕಾರಿಗಳು, ಕಲಾವಿದರು, ಸಾಹಿತಿಗಳು ಪಾಲ್ಗೊಂಡಿದ್ದಾರೆ.

(ಬಾಕ್ಸ್)

ಬಂಜಾರ ಸಮುದಾಯದ ಮಕ್ಕಳಿಗೆ ವಸತಿಶಾಲೆ

ಸಂತ ಸೇವಾಲಾಲ್ ಅವರ ಜನ್ಮಸ್ಥಳವಾದ ಸೂರಗೊಂಡನಕೊಪ್ಪದ ಭಾಯಾಗಡದಲ್ಲಿ ಬಂಜಾರ ಸಮುದಾಯದ ಮಕ್ಕಳಿಗಾಗಿ ವಸತಿಶಾಲೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಸಮಾಜಕಲ್ಯಾಣ ಸಚಿವ ಡಾ.ಎಚ್. ಸಿ. ಮಹದೇವಪ್ಪ ಹೇಳಿದರು.

ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಮುಂದಿನ ಬಜೆಟ್‌ ನಲ್ಲಿ ಘೋಷಣೆ ಮಾಡುವ ಭರವಸೆ ನೀಡಿದರು.

ಲಂಬಾಣಿ ಸಮಾಜದವರು ಉದ್ಯೋಗ ಅರಸಿ ವಲಸೆ ಹೋಗುವುದರಿಂದ ಅವರ ಮಕ್ಕಳ ಶಿಕ್ಷಣ ಮೊಟಕುಗೊಳ್ಳಬಾರದು ಎಂಬ ಕಾರಣಕ್ಕೆ 25 ರಿಂದ 40 ಕೋಟಿ ರೂ. ವೆಚ್ಚದಲ್ಲಿ ವಸತಿಶಾಲೆ ಆರಂಭಿಸಲಾಗುವುದು. ಅಲ್ಲಿ 1 ರಿಂದ 6 ಮತ್ತು 6 ರಿಂದ 12 ನೇ ತರಗತಿಯ ವರೆಗೆ ಮಕ್ಕಳಿಗೆ ಶಿಕ್ಷಣ ಒದಗಿಸಲಾಗುವುದು ಎಂದು ತಿಳಿಸಿದರು.

ಸಮುದಾಯದ 1 ಸಾವಿರ ಯುವಜನರಿಗೆ 6 ಕೋಟಿ ರೂ. ವೆಚ್ಚದಲ್ಲಿ ಕೌಶಲ ತರಬೇತಿ ನೀಡುವ ವ್ಯವಸ್ಥೆಯನ್ನು ಸೂರಗೊಂಡನ ಕೊಪ್ಪದಲ್ಲಿ ಮಾಡಲಾಗುವುದು ಎಂದರು.

ಸಂತ ಸೇವಾಲಾಲ್ ಟ್ರಸ್ಟ್ ಗೆ ಅನುದಾನ ನೀಡುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ರಸ್ತೆ ಅಭಿವೃದ್ಧಿ ಭರವಸೆ

ಉತ್ಸವದ ಉದ್ಘಾಟನೆ ನೆರವೇರಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಸೂರಗೊಂಡನ ಕೊಪ್ಪಕ್ಕೆ ಸಂಪರ್ಕ ಕಲ್ಪಿಸುವ ಜೋಗ – ಚಿನ್ನಿಕಟ್ಟೆ ರಸ್ತೆಯ ಅಭಿವೃದ್ಧಿ ಮಾಡಲಾಗುವುದು. ಬರುವ ಬಜೆಟ್‌ ನಲ್ಲಿ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

ಬಂಜಾರ ಸಮುದಾಯ ಹಾಗೂ ಭಾಯಾಗಡ ಅಭಿವೃದ್ಧಿಗೆ ನಮ್ಮ ಸರ್ಕಾರ ಸೇರಿದಂತೆ ಎಲ್ಲ ಸರ್ಕಾರಗಳೂ ಪ್ರಯತ್ನಿಸಿವೆ ಎಂದರು.

ಶೋಷಿತ ಸಮುದಾಯಗಳು ಮುಖ್ಯವಾಹಿನಿಗೆ ಬರಬೇಕು. ಬಂಜಾರ ಸಮಾಜದವರು ದೇಶಾದ್ಯಂತ ಇದ್ದಾರೆ. ಶೈಕ್ಷಣಿಕವಾಗಿ ಇನ್ನೂ ಅಭಿವೃದ್ಧಿ ಆಗಬೇಕಿದೆ. ಸರ್ಕಾರದ ಸೌಲಭ್ಯಗಳು ಅವರಿಗೆ ಸಿಗಬೇಕು ಎಂದು ಹೇಳಿದರು.

ಸ್ವಾಭಿಮಾನಕ್ಕೆ ಹೆಸರು

ಬಂಜಾರ ಸಮುದಾಯದವರು ಸ್ವಾಭಿಮಾನಕ್ಕೆ ಹೆಸರಾಗಿದ್ದು ಅವರ ಅಭಿವೃದ್ಧಿ ವಿಚಾರದಲ್ಲಿ ಸಹಕಾರ ನೀಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಲಂಬಾಣಿ ಸಮಾಜದವರು ವಿಶಿಷ್ಟ ಸಂಸ್ಕೃತಿ, ಪರಂಪರೆ ಹೊಂದಿದ್ದಾರೆ. ಈ ಸಮುದಾಯದ ಅಭಿವೃದ್ಧಿಗೆ ಎಲ್ಲ ಪಕ್ಷಗಳೂ ಕೈಜೋಡಿಸಿವೆ ಎಂದು ತಿಳಿಸಿದರು.

ವಿಶೇಷವಾಗಿ ಬಿ.ಎಸ್. ಯಡಿಯೂರಪ್ಪ ಆಡಳಿತ ಅವಧಿಯಲ್ಲಿ ಸೇವಾಲಾಲ್ ಜಯಂತಿಯನ್ನು ಸರ್ಕಾರದಿಂದ ಆಚರಿಸಲು ತೀರ್ಮಾನಿಸಲಾಯಿತು. ತಾಂಡಾ ಅಭಿವೃದ್ಧಿ ನಿಗಮ ರಚಿಸಲಾಯಿತು. ತಾಂಡಾಗಳಲ್ಲಿ ಕಾಂಕ್ರಿಟ್ ರಸ್ತೆಗಳ ಅಭಿವೃದ್ಧಿ ಮಾಡಲಾಯಿತು ಎಂದು ವಿವರಿಸಿದರು.

(ಕೋಟ್)

ಮಹಾರಾಷ್ಟ್ರ ದಲ್ಲಿರುವ ಸಂತ ಸೇವಾಲಾಲ್ ಅವರ ಐಕ್ಯಸ್ಥಳ ಪೌರಾದೇವಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ದೇಶದಲ್ಲಿ 10 ಕೋಟೆ ಜನಸಂಖ್ಯೆ ಹೊಂದಿರುವ ಬಂಜಾರ ಸಮಾಜ ರಾಜಕೀಯ ಚಿತ್ರಣವನ್ನೇ ಬದಲಿಸುವ ಶಕ್ತಿ ಹೊಂದಿದೆ.

  • ಸಂಜಯ್ ಡಿ. ರಾಥೋಡ್, ಮಣ್ಣು ಮತ್ತು ಜಲ ಸಂರಕ್ಷಣೆ ಸಚಿವ, ಮಹಾರಾಷ್ಟ್ರ
Share This Article

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…

ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups

Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…