ದಾವಣಗೆರೆ : ಬ್ಯಾಂಕ್ ರಾಷ್ಟ್ರೀಕರಣವು ದೇಶದ ಬಹುದೊಡ್ಡ ಆರ್ಥಿಕ ಕ್ರಾಂತಿಯಾಗಿದೆ. ಅದರ ಫಲವಾಗಿಯೇ ಭಾರತ ಬೃಹತ್ ಆರ್ಥಿಕ ಶಕ್ತಿಯಾಗಿ ಬೆಳೆದಿದೆ ಎಂದು ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಎಚ್.ಜಿ. ಉಮೇಶ್ ಆವರಗೆರೆ ಹೇಳಿದರು.
ಜಿಲ್ಲಾ ಬ್ಯಾಂಕ್ ನೌಕರರ ಸಂಘದಿಂದ ನಗರದಲ್ಲಿ ಬುಧವಾರ ಆಯೋಜಿಸಿದ್ದ 55ನೇ ಬ್ಯಾಂಕ್ ರಾಷ್ಟ್ರೀಕರಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇತ್ತೀಚಿನ ವರ್ಷಗಳಲ್ಲಿ ಸರ್ಕಾರದ ಖಾಸಗೀಕರಣ ಪರವಾದ ನೀತಿಗಳಿಂದ ಬ್ಯಾಂಕುಗಳು ಮಾತ್ರವಲ್ಲದೆ ಅನೇಕ ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳು ಅಪಾಯಕ್ಕೆ ಒಳಗಾಗಿವೆ. ಬ್ಯಾಂಕುಗಳ ಖಾಸಗೀಕರಣವಾದರೆ ಜನಸಾಮಾನ್ಯರ ಸುಮಾರು 180 ಲಕ್ಷ ಕೋಟಿ ರೂ. ಠೇವಣಿ ಹಣ ಸಮಸ್ಯೆಗೆ ಸಿಲುಕಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳು ದೇಶದ ನಾಗರಿಕರ ಆಸ್ತಿಗಳಾಗಿವೆ. ಅವುಗಳನ್ನು ಉಳಿಸಿಕೊಳ್ಳುವುದು ಪ್ರತಿ ನಾಗರಿಕನ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ನಾಯರಿ ಮಾತನಾಡಿ, ಬ್ಯಾಂಕ್ ರಾಷ್ಟ್ರೀಕರಣವು ದೇಶಕ್ಕೆ ಆರ್ಥಿಕ ಸಬಲತೆಯನ್ನು ನೀಡಿದೆ. ಈಗಲೂ ವರ್ಷಕ್ಕೆ ಲಕ್ಷಾಂತರ ಕೋಟಿ ರೂ.ಗಳ ನಿವ್ವಳ ಲಾಭವನ್ನೂ ಗಳಿಸುತ್ತಿದೆ. ಆದರೆ ಇನ್ನೊಂದೆಡೆ ಬ್ಯಾಂಕುಗಳ ವಿಲೀನೀಕರಣ, ಖಾಸಗೀಕರಣದ ಹುನ್ನಾರ, ಉದ್ದೇಶಪೂರ್ವಕವಾಗಿ ಸಾಲ ಮರುಪಾವತಿ ಮಾಡದಿರುವ ಖಾಸಗಿ ಬಂಡವಾಳಶಾಹಿಗಳು, ಬ್ಯಾಂಕಿಂಗ್ ಕಾಯ್ದೆಗೆ ಅನಗತ್ಯವಾದ ತಿದ್ದುಪಡಿಗಳು ಹೀಗೆ ಹಲವಾರು ಕೆಟ್ಟ ನೀತಿಗಳ ಫಲವಾಗಿ ರಾಷ್ಟ್ರೀಕೃತ ಬ್ಯಾಂಕಿಂಗ್ ವ್ಯವಸ್ಥೆ ಕತ್ತಿಯ ಅಲುಗಿನ ಮೇಲೆ ಸಾಗುತ್ತಿದೆ ಎಂದು ಹೇಳಿದರು.
ಸಂಘದ ಅಧ್ಯಕ್ಷ ಬಿ. ಆನಂದಮೂರ್ತಿ ಮಾತನಾಡಿ ಬ್ಯಾಂಕಿಂಗ್ ಸೌಲಭ್ಯವು ದೇಶದ ಪ್ರತಿ ನಾಗರಿಕರ ಮೂಲಭೂತ ಹಕ್ಕಾಗಬೇಕು, ಈ ಉದ್ದೇಶ ಈಡೇರಲು ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸಬೇಕು, ವಿಸ್ತಾರಗೊಳಿಸಬೇಕು. ಇದಕ್ಕಾಗಿ ನಮ್ಮ ಹೋರಾಟ ನಿರಂತರವಾಗಿ ಇರಲಿದೆ ಎಂದು ತಿಳಿಸಿದರು.
ನಿವೃತ್ತ ಬ್ಯಾಂಕ್ ನೌಕರರ ಒಕ್ಕೂಟದ ಎಚ್. ಸುಗೀರಪ್ಪ, ಸಂಘದ ಪದಾಧಿಕಾರಿಗಳಾದ ಆರ್. ಆಂಜನೇಯ, ಎಚ್.ಎಸ್. ತಿಪ್ಪೇಸ್ವಾಮಿ, ಎಂ. ಸತೀಶ್, ಕೆ.ರವಿಶಂಕರ್, ಪರಶುರಾಮ, ಅಜಯ್ ಕುಮಾರ್, ಸುಮಂತ್, ಶ್ರೀನಿವಾಸ ನಾಡಿಗ್, ಡಿ.ಎನ್. ಅಣ್ಣಪ್ಪ, ಕೆ.ಶಶಿಶೇಖರ್, ಅಮೃತಾ, ರಮೇಶ್, ಪ್ರಶಾಂತ್ ಇದ್ದರು. ಸಂಘದ ಖಜಾಂಚಿ ಕೆ.ವಿಶ್ವನಾಥ್ ಬಿಲ್ಲವ ಸ್ವಾಗತಿಸಿದರು, ಕಾರ್ಯದರ್ಶಿ ಎಚ್.ಎಸ್. ತಿಪ್ಪೇಸ್ವಾಮಿ ವಂದಿಸಿದರು.
ಬ್ಯಾಂಕ್ ರಾಷ್ಟ್ರೀಕರಣದಿಂದ ದೇಶಕ್ಕೆ ಆರ್ಥಿಕ ಬಲ
ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips
ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…
ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…
ಬೆಂಗಳೂರು: ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…
ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower
ಬೆಂಗಳೂರು: ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…