ದಾವಣಗೆರೆ : ಶಾಪಿಂಗ್ ಮಾಡುವುದು ಹಾಗೂ ಆನ್‌ಲೈನ್‌ನಲ್ಲಿ ಖರೀದಿಸುವ ನಮ್ಮ ಪ್ರವೃತ್ತಿಯು ಪರಿಸರಕ್ಕೆ ಹಾನಿ ಉಂಟು ಮಾಡುತ್ತಿದೆ ಎಂದು ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ರಿಜಿಸ್ಟ್ರಾರ್ ಡಾ. ಬಿ. ಬಕ್ಕಪ್ಪ ಹೇಳಿದರು. ಬಾಪೂಜಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ, ಇನ್‌ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್, ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್, ಗೋ-ಗ್ರೀನ್ ಕ್ಲಬ್ ಹಾಗೂ ಎನ್‌ಎಸ್‌ಎಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ನಗರದ ಬಿಐಇಟಿ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಾಪಿಂಗ್ ಮಾಡುವಾಗ ಹೆಚ್ಚು ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದೇವೆ, ಭೂಮಿಗೆ ಎಸೆದು ಪರಿಸರಕ್ಕೆ ತೊಂದರೆ ಮಾಡುತ್ತಿದ್ದೇವೆ. ಆನ್‌ಲೈನ್ ಮೂಲಕ ಆರ್ಡರ್ ಮಾಡಿ ನಮಗೆ ಬೇಕಾದ ವಸ್ತುಗಳನ್ನು ತರಿಸುವ ಪ್ರವೃತ್ತಿಯೂ ಜಾಸ್ತಿಯಾಗಿದೆ. ಇದರಿಂದ ಉತ್ಪತ್ತಿಯಾಗುವ ತ್ಯಾಜ್ಯವೂ ಪರಿಸರಕ್ಕೆ ಅಪಾಯಕಾರಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಭಾರತ 32.28 ಲಕ್ಷ ಚದರ ಕಿ.ಮೀ.ನಷ್ಟು ಭೂಮಿಯನ್ನು ಹೊಂದಿದೆ. ಅದರಲ್ಲಿ 8.31 ಲಕ್ಷ ಚದರ ಕಿ.ಮೀ. ಅರಣ್ಯವಿದೆ. ಭಾರತ ಸರ್ಕಾರದ ಅರಣ್ಯ ನೀತಿಯ ಪ್ರಕಾರ ಶೇ. 3 ರಷ್ಟು ಅರಣ್ಯ ಪ್ರದೇಶವಿರಬೇಕು, ಆದರೆ ಶೇ. 25.4 ರಷ್ಟು ಮಾತ್ರ ಇದೆ ಎಂದು ಮಾಹಿತಿ ನೀಡಿದರು. ಜಗತ್ತಿನ 100 ಅತಿಹೆಚ್ಚು ಮಾಲಿನ್ಯ ಇರುವ ನಗರಗಳ ಪೈಕಿ 66 ಭಾರತದಲ್ಲೇ ಇವೆ. ಅದರಲ್ಲೂ ದೆಹಲಿ ನಂ. 1 ಸ್ಥಾನದಲ್ಲಿದೆ. ನಾವು ಉಪಯೋಗಿಸುವ ನೀರು, ಗಾಳಿಯನ್ನು ಮಲಿನಗೊಳಿಸುತ್ತಿದ್ದೇವೆ ಎಂದು ತಿಳಿಸಿದರು. ಸ್ವಚ್ಛ ದಾವಣಗೆರೆ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕೈಜೋಡಿಸಬೇಕು. ನಗರದಲ್ಲಿ 55 ಕಾಲೇಜುಗಳಿವೆ. ಅವುಗಳಲ್ಲಿ ಆಯ್ದ ಕೆಲ ಕಾಲೇಜುಗಳ ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿಗಳನ್ನು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಬೇಕು. ಪರಿಸರದ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು. ಇನ್‌ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್‌ನ ದಾವಣಗೆರೆ ಕೇಂದ್ರದ ಅಧ್ಯಕ್ಷ ಡಾ. ಎಸ್. ಸುರೇಶ್, ಪ್ರಾಧ್ಯಾಪಕ ಡಾ.ಜಿ.ಪಿ. ದೇಸಾಯಿ ಇದ್ದರು. ಡಾ. ಕೆ.ಸಿ. ದೇವೇಂದ್ರಪ್ಪ ಸ್ವಾಗತಿಸಿದರು. ಜಿ.ಬಿ. ಪ್ರವೀಣ್ ಕುಮಾರ್ ಪ್ರಾರ್ಥಿಸಿದರು. ಎನ್. ಪ್ರಿಯಾಂಕಾ ನಿರೂಪಿಸಿದರು.
ಪರಿಸರಕ್ಕೆ ಮಾರಕವಾದ ಶಾಪಿಂಗ್ ಪ್ರವೃತ್ತಿ

ಮಳೆಗಾಲದಲ್ಲಿ ಈ ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಬಳಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಿಕೊಳ್ಳಿ! rainy season
rainy season: ಮಳೆಗಾಲದಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳು ಅಥವಾ ಇತರ ಶಿಲೀಂಧ್ರ ಸೋಂಕುಗಳು ಸುಲಭವಾಗಿ ಹರಡುತ್ತವೆ. ಮಳೆಗಾಲದಲ್ಲಿ…
ಸಣ್ಣ ತೂಕ ಎತ್ತಿದರೂ ಸುಸ್ತಾಗುತ್ತಾ? ಹಾಗಾದರೆ ಈ ಆಹಾರಗಳಿಂದ ನರ ದೌರ್ಬಲ್ಯ ನಿವಾರಿಸಿ… Health Tips
Health Tips : ದೇಹವು ಸರಿಯಾದ ಪೋಷಕಾಂಶಗಳನ್ನು ಪಡೆಯದಿದ್ದರೆ, ಅನೇಕ ರೋಗಗಳಿಗೆ ತುತ್ತಾಗುತ್ತದೆ. ನಿಮ್ಮಲ್ಲಿರುವ ಕೆಟ್ಟ…