More

    ಕೋಲ್ಕತ್ತಾದಲ್ಲಿ ಶಿವದಾಸ್ ಘೋಷ್‌ ಜನ್ಮ ಶತಮಾನೋತ್ಸವ

    ದಾವಣಗೆರೆ: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ, ಅಪ್ರತಿಮ ಮಾರ್ಕ್ಸ್‌ವಾದಿ ಚಿಂತಕ ಹಾಗೂ ಎಸ್.ಯು.ಸಿ.ಐ. ಕಮ್ಯುನಿಸ್ಟ್ ಪಕ್ಷದ ಸಂಸ್ಥಾಪಕ ಕಾಮ್ರೇಡ್ ಶಿವದಾಸ್ ಘೋಷ್ ಅವರ ಜನ್ಮ ಶತಮಾನೋತ್ಸವದ ರಾಷ್ಟ್ರಮಟ್ಟದ ಸಮಾರೋಪ ಕಾರ್ಯಕ್ರಮವನ್ನು  ಆಗಸ್ಟ್ 5ರಂದು ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
     2022ರ ಆಗಸ್ಟ್ 5ರಂದು ನವದೆಹಲಿಯಲ್ಲಿ ಜನ್ಮಶತಾಬ್ದಿಯ ಕಾರ್ಯಕ್ರಮ ಉದ್ಘಾಟಿಸಿ ದೇಶಾದ್ಯಂತ ಆಚರಣೆ ಮಾಡಲಾಗಿದೆ ಎಂದು ಎಸ್‌ಯುಸಿಐ(ಸಿ)ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಕೈದಾಳೆ ತಿಳಿಸಿದ್ದಾರೆ.
     ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ದೇಶದ 25ಕ್ಕೂ ಹೆಚ್ಚು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 10 ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ. ಕರ್ನಾಟಕದಿಂದ ಸುಮಾರು 3 ಸಾವಿರ ಜನ ಕೋಲ್ಕತ್ತಾಗೆ ಪ್ರಯಾಣ ಬೆಳೆಸಲು ಸಜ್ಜಾಗಿದ್ದಾರೆ.
     ದಾವಣಗೆರೆ ವಿಭಾಗದಿಂದ ಸುಮಾರು 120 ಮಂದಿ ಪ್ರತಿನಿಧಿಗಳು ಮಂಗಳವಾರ ದಾವಣಗೆರೆ ರೈಲ್ವೇ ನಿಲ್ದಾಣದಿಂದ ಕೋಲ್ಕತ್ತಾಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts