More

    ಗಾಂಧಿ ಜಯಂತಿ ಅಂಗವಾಗಿ ಪ್ರಬಂಧ ಸ್ಪರ್ಧೆ

    ದಾವಣಗೆರೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಪ್ರೌಢಶಾಲೆ, ಪದವಿಪೂರ್ವ, ಕಾಲೇಜು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಹೇಳಿದರು.
     ಅ. 2ರಂದು ನಡೆಯಲಿರುವ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ಸಂಬಂಧ ಜಿಲ್ಲಾಡಳಿತ ಭವನದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
     ಶಿಕ್ಷಣ ಇಲಾಖೆಯಿಂದ ಎಲ್ಲ ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗುವುದು. ಅತ್ಯುತ್ತಮ 3 ಪ್ರಬಂಧಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಎಂದು ನಗದು ಬಹುಮಾನ ನೀಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಪ್ರಕಟವಾದ ಅತ್ಯುತ್ತಮ ಪ್ರಬಂಧಗಳನ್ನು ರಾಜ್ಯಮಟ್ಟದ ಪ್ರಶಸ್ತಿಗಾಗಿ ಕಳುಹಿಸಿ ಕೊಡಲಾಗುತ್ತದೆ ಎಂದರು.
     ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿಯನ್ನು ಅ. 2ರಂದು ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದರು.
     ಅಂದು ಬೆಳಗ್ಗೆ 10.30ಕ್ಕೆ ಆರಂಭವಾಗುವ ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆ, ದೇಶಭಕ್ತಿ ಗೀತೆಗಳ ಗಾಯನ ಮತ್ತು ಉಪನ್ಯಾಸವನ್ನು ಏರ್ಪಡಿಸಲಾಗುತ್ತದೆ. ಕಳೆದ ಬಾರಿಯಂತೆ ಈ ಬಾರಿಯೂ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಹೇಳಿದರು.
     ಕಾರ್ಯಕ್ರಮದಲ್ಲಿ ಭಾಗವಹಿಸುವ ಗಣ್ಯರಿಗೆ ಹೂವಿನ ಬದಲಾಗಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಜೀವನ ಚರಿತ್ರೆ, ಸಾಧನೆ, ವಿಮರ್ಶೆಗಳಂತಹ ಪುಸ್ತಕಗಳನ್ನೇ ನೀಡಬೇಕು. ಗಣೇಶ ಚತುರ್ಥಿ ಅಂಗವಾಗಿ ಮಣ್ಣಿನ ಗಣೇಶ ವಿಗ್ರಹಗಳ ಬದಲಾಗಿ ಬೆಲ್ಲದ ವಿಗ್ರಹಗಳನ್ನು ಬಳಸಿದಾಗ ರೈತರಿಗೂ ಅನುಕೂಲ ಹಾಗೂ ಮಾಲಿನ್ಯ ತಡೆಗಟ್ಟಬಹುದು ಎಂದರು.
     ಜಿ.ಪಂ. ಉಪ ಕಾರ್ಯದರ್ಶಿ ಕೃಷ್ಣ ನಾಯ್ಕ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಪಾಲಿಕೆ ಆಯುಕ್ತೆ ರೇಣುಕಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಗೊಂಡ ಬಸರಗಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts