ದಾವಣಗೆರೆ : ರಾಜಕೀಯ, ಶೈಕ್ಷಣಿಕ, ಆಧ್ಯಾತ್ಮಿಕ, ಧಾರ್ಮಿಕವಾಗಿ ಎಲ್ಲ ದೃಷ್ಟಿಯಿಂದಲೂ ಪರಿಪೂರ್ಣತೆ ಹೊಂದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯಂತಹ ಇನ್ನೊಬ್ಬ ನಾಯಕ 100 ವರ್ಷ ಕಳೆದರೂ ದೇಶಕ್ಕೆ ಸಿಗುವುದಿಲ್ಲ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದರು.
ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಅರಕೆರೆ, ಹಿರೇಗೋಣಿಗೆರೆ, ಬೇಲಿಮಲ್ಲೂರು ಗ್ರಾಮಗಳಲ್ಲಿ ಮತಯಾಚಿಸಿ ಮಾತನಾಡಿದರು.
ಮೋದಿ ಕೇವಲ ವ್ಯಕ್ತಿಯಲ್ಲ, ಅವರೊಂದು ಶಕ್ತಿ. 23 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿ, ದೇಶದ ಪ್ರಧಾನಿಯಾಗಿ ಅವರ ರಾಜಕೀಯ ಜೀವನದಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೆ 16ರಿಂದ 18 ಗಂಟೆ ದೇಶದ ಸರ್ವರ ಒಳಿತಿಗಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಅರ್ಬನ್ ನಕ್ಸಲ್ ಮನಸ್ಥಿತಿ: ಕಾಂಗ್ರೆಸ್‌ನವರದು ಅರ್ಬನ್ ನಕ್ಸಲ್ ಮನಸ್ಥಿತಿ. ದೇಶದ ಸಂಪತ್ತಿನ ಹೆಚ್ಚಿನ ಪಾಲು ಮುಸ್ಲಿಮರಿಗೆ ಸಿಗಬೇಕು ಎನ್ನುವ ನಿಲುವು ಅವರದು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಆರ್ಥಿಕ ಸಮೀಕ್ಷೆ ಮಾಡುವುದಾಗಿ ಹೇಳುತ್ತಿದ್ದಾರೆ. ಕಷ್ಟಪಟ್ಟು ನೀವು ದುಡಿದ ಆಸ್ತಿ ಕಂಡವರ ಪಾಲಾಗಲು ಯಾವುದೇ ಕಾರಣಕ್ಕೂ ಬಿಡಬೇಡಿ. ಆರ್ಥಿಕ ಸಮೀಕ್ಷೆ ನಡೆಸುತ್ತೇವೆ ಎನ್ನುವವರನ್ನು ಮನೆಗೆ ಕಳುಹಿಸಲು ಸಿದ್ಧರಾಗಿ ಎಂದು ತಿಳಿಸಿದರು.
ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅವರ ಬ್ರದರ್ಸ್‌ಗಳ ಗೂಂಡಾ ವರ್ತನೆ, ಭಯೋತ್ಪಾದನೆ ಹೆಚ್ಚಾಗುತ್ತದೆ ಎನ್ನುವುದಕ್ಕೆ ಅನೇಕ ಸಾಕ್ಷಿಗಳಿವೆ ಎಂದು ನೇಹಾ ಹತ್ಯೆ ಸೇರಿ ಅನೇಕ ಘಟನೆಗಳನ್ನು ಉದಾಹರಿಸಿದರು.
ಮಂಡಲ ಅಧ್ಯಕ್ಷ ಸುರೇಶ್, ಬಿಜೆಪಿ ಮುಖಂಡರಾದ ಬಿ.ಎಸ್. ಜಗದೀಶ್, ಎಂ.ಆರ್. ಮಹೇಶ್, ಕುಬೇರಪ್ಪ, ಸಂತೋಷ ಕುಮಾರ್, ಎಲ್.ಕೆ. ಮಂಜಪ್ಪ, ಪ್ರಭು, ರವಿಕುಮಾರ್, ಹೊನ್ನಪ್ಪ, ರಾಮಣ್ಣ, ಶಾಂತರಾಜ್ ಪಾಟೀಲ್, ಎ.ಬಿ. ಹನುಮಂತಪ್ಪ, ಅರಕೆರೆ ನಾಗರಾಜ್, ರಂಗನಾಥ್, ಜಿಪಂ ಮಾಜಿ ಉಪಾಧ್ಯಕ್ಷ ಸುರೇಂದ್ರ ನಾಯ್ಕ, ಯೋಗೇಶ್ ಇತರರಿದ್ದರು.
ನೂರು ವರ್ಷ ಕಳೆದರೂ ಮೋದಿಯಂತಹ ನಾಯಕ ಸಿಗಲ್ಲ
Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..
ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…
Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ
ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…
ಎಷ್ಟು ಪ್ರಮಾಣದಲ್ಲಿ ಉಪ್ಪು ಸೇವಿಸಿದ್ರೆ ಆರೋಗ್ಯಕ್ಕೆ ತುಂಬಾ ಡೇಂಜರ್? ಇಲ್ಲಿದೆ ಉಪಯುಕ್ತ ಮಾಹಿತಿ… Salt
ಊಟಕ್ಕೆ ಉಪ್ಪು ( Salt ) ತುಂಬಾನೇ ಅವಶ್ಯಕವಾಗಿದ್ದರೂ ಅದು ಆರೋಗ್ಯ ( Health )…