ಪೊಲೀಸ್ ಅಧಿಕಾರಿಗಳ ತಲೆದಂಡಕ್ಕೆ ಆಕ್ರೋಶ  

blank

ದಾವಣಗೆರೆ :  ಬೆಂಗಳೂರಿನಲ್ಲಿ ಆರ್‌ಸಿಬಿ ತಂಡದ ಸಂಭ್ರಮಾಚರಣೆಯ ವೇಳೆ ಭೀಕರ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದನ್ನು ಖಂಡಿಸಿ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹಸಚಿವರ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.  ವಿದ್ಯಾರ್ಥಿ ಭವನ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರ ಭಾವಚಿತ್ರಗಳ ಪೋಸ್ಟರ್‌ಗಳಿಗೆ ಬೆಂಕಿ ಹಚ್ಚಲು ಪ್ರಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು.  ಇದೇ ವೇಳೆ ಬಿಜೆಪಿ ರೈತಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ಮಾತನಾಡಿ, ಸರ್ಕಾರ ಯಾವುದೇ ಯೋಜನೆ ಮಾಡಿಕೊಳ್ಳದೇ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದರಿಂದ ಈ ಅವಘಡ ಸಂಭವಿಸಿದೆ. ಇದರಿಂದ 11 ಜನರು ಪ್ರಾಣ ಕಳೆದುಕೊಳ್ಳುವಂತಾಯಿತು. ಈ ಸರ್ಕಾರಕ್ಕೆ ಸೂಕ್ಷ್ಮತೆ ಇಲ್ಲ ಎಂದು ಕಿಡಿಕಾರಿದರು.  ಈ ಘಟನೆ ಹಿನ್ನೆಲೆಯಲ್ಲಿ ದಕ್ಷ ಪೊಲೀಸ್ ಅಧಿಕಾರಿಗಳ ತಲೆದಂಡವಾಗಿದೆ. ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ಪೊಲೀಸರನ್ನು ಅಮಾನತ್ತುಗೊಳಿಸಿ ಪ್ರಕರಣದ ಹೊಣೆಯಿಂದ ನುಣುಚಿಕೊಳ್ಳಲು ಯತ್ನಿಸಿದೆ. ಇದಕ್ಕೆಲ್ಲ ಪೊಲೀಸರು ನೈತಿಕ ಸ್ಥೈರ್ಯ ಕಳೆದುಕೊಳ್ಳಬಾರದು ಎಂದರು.  ಮುಖಂಡ ಚಂದ್ರಶೇಖರ್ ಪೂಜಾರ್ ಮಾತನಾಡಿ, ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ನಡೆದಿರುವ ಅವಘಡ ಪೊಲೀಸರಿಂದ ನಡೆದಿಲ್ಲ. ಬದಲಾಗಿ ಕಾಂಗ್ರೆಸ್ ಸರ್ಕಾರದ ಆತುರದ ನಿರ್ಧಾರದಿಂದ ಆಗಿದೆ. ಆದ್ದರಿಂದ ಕೂಡಲೇ ಪೊಲೀಸರ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.  ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಕುಮಾರ ನಾಯ್ಕ್, ಐರಣಿ ಅಣ್ಣೇಶ್, ಮಾಜಿ ಮೇಯರ್ ಎಸ್.ಟಿ. ವೀರೇಶ್, ಎಚ್.ಬಿ. ನವೀನ್ ಕುಮಾರ್, ಸಂತೋಷ್ ಪೈಲ್ವಾನ್, ರಾಜು ವೀರಣ್ಣ, ಅಲೋಕ್ ಕುಮಾರ್, ರಾಜು ತೋಟಪ್ಪ, ಧನುಷ್ ಪ್ರತಿಭಟನೆಯಲ್ಲಿ ದ್ದರು.

Share This Article

ಮಳೆಗಾಲದಲ್ಲಿ ಈ ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಬಳಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಿಕೊಳ್ಳಿ! rainy season

rainy season: ಮಳೆಗಾಲದಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳು ಅಥವಾ ಇತರ ಶಿಲೀಂಧ್ರ ಸೋಂಕುಗಳು ಸುಲಭವಾಗಿ ಹರಡುತ್ತವೆ. ಮಳೆಗಾಲದಲ್ಲಿ…

ಸಣ್ಣ ತೂಕ ಎತ್ತಿದರೂ ಸುಸ್ತಾಗುತ್ತಾ? ಹಾಗಾದರೆ ಈ ಆಹಾರಗಳಿಂದ ನರ ದೌರ್ಬಲ್ಯ ನಿವಾರಿಸಿ… Health Tips

Health Tips : ದೇಹವು ಸರಿಯಾದ ಪೋಷಕಾಂಶಗಳನ್ನು ಪಡೆಯದಿದ್ದರೆ, ಅನೇಕ ರೋಗಗಳಿಗೆ ತುತ್ತಾಗುತ್ತದೆ. ನಿಮ್ಮಲ್ಲಿರುವ ಕೆಟ್ಟ…