More

    ರಕ್ತದಾನದಿಂದ ಜೀವ ರಕ್ಷಿಸಿದ ಪುಣ್ಯ

    ದಾವಣಗೆರೆ : ರಕ್ತಕ್ಕೆ ಯಾವುದೇ ಪರ್ಯಾಯವಿಲ್ಲ. ಒಂದು ಯೂನಿಟ್ ರಕ್ತದಾನದಿಂದ ಮೂರು ಜೀವ ಉಳಿಸಿದ ಪುಣ್ಯ ಸಿಗಲಿದೆ ಎಂದು ಎಸ್.ಎಸ್. ಕೇರ್ ಟ್ರಸ್ಟ್‌ನ ಲೈಫ್ ಟ್ರಸ್ಟಿ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
     ಎಸ್‌ಎಸ್ ಕೇರ್ ಟ್ರಸ್ಟ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯಿಂದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ 56ನೇ ಜನ್ಮದಿನ ಪ್ರಯುಕ್ತ ನಗರದ ಮಾ.ಸ.ಬ. ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.
     ಆರೋಗ್ಯವಂತ ಯುವಜನರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬೇಕು. ಇದರಿಂದ ರಕ್ತದ ಕೊರತೆ ನಿವಾರಣೆಯಾಗಲಿದೆ. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಿರಂತರ ನಡೆಯಬೇಕು ಎಂದು ತಿಳಿಸಿದರು.
     ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಡಾ.ಎಂ.ಜಿ. ಈಶ್ವರಪ್ಪ ಮಾತನಾಡಿ, ಸುಶಿಕ್ಷಿತ ಹಾಗೂ ಜವಾಬ್ದಾರಿಯುತ ಸಮಾಜದಲ್ಲಿ ಬದುಕುತ್ತಿರುವ ನಾವು ರಕ್ತದಾನದ ಮೂಲಕ ಇನ್ನೊಂದು ಜೀವ ಉಳಿಸುವ ಮಹತ್ಕಾರ್ಯ ಮಾಡಬೇಕಾಗಿದೆ ಎಂದರು.
     ಎಸ್.ಎಸ್ ಆಸ್ಪತ್ರೆಯ ರೋಗಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಶಶಿಕಲಾ ಕೃಷ್ಣಮೂರ್ತಿ ಮಾತನಾಡಿ, ಇತ್ತೀಚಿನ ಒತ್ತಡ ಮತ್ತು ಯಾಂತ್ರಿಕ ಜೀವನದಲ್ಲಿ ಮೂರ‌್ನಾಲ್ಕು ತಿಂಗಳಿಗೊಮ್ಮೆ ರಕ್ತದಾನ ಮಾಡಬೇಕು. ಇದರಿಂದ ಕೊಬ್ಬಿನಾಂಶ ತಗ್ಗಿಸಬಹುದು. ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ ತಡೆಗಟ್ಟಬಹುದು ಎಂದು ತಿಳಿಸಿದರು.
     ಪ್ರಾಚಾರ್ಯೆ ಪ್ರೊ. ಜಿ.ಸಿ. ನೀಲಾಂಬಿಕಾ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಡಾ. ಪ್ರಸಾದ್, ಡಾ. ಅರುಣ್‌ಕುಮಾರ್, ಡಾ. ಕವಿತಾ. ಪ್ರೊ. ಟಿ.ಆರ್. ರಂಗಸ್ವಾಮಿ, ಎಸ್. ಪರಮೇಶಿ, ಪ್ರೊ. ತಾರಾರಾಣಿ, ಡಾ.ಎ.ಬಿ. ವಿಜಯಕುಮಾರ್, ಪ್ರೊ.ಕೆ.ವೈ. ಈಶ್ವರ್ ಇದ್ದರು. ರಕ್ತದಾನ ಮಾಡಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.
     ರಾಷ್ಟ್ರೀಯ ಸೇವಾ ಸಂಯೋಜನಾಧಿಕಾರಿ ಡಾ. ಆರ್. ರಾಘವೇಂದ್ರ ಸ್ವಾಗತಿಸಿದರು. ಡಾ. ಎಂ. ಮಂಜಪ್ಪ ನಿರೂಪಿಸಿದರು. ಡಾ.ಒ.ಪ್ರವೀಣ್ ಕುಮಾರ್ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts