More

    ಬಜೆಟ್ ನಲ್ಲಿ ಎಲ್ಲ ವರ್ಗಕ್ಕೂ ಸಮಾನ ಸೌಲಭ್ಯ

    ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ನಲ್ಲಿ ಎಲ್ಲ ವರ್ಗದವರಿಗೂ ಸಮಾನ ಸೌಲಭ್ಯ ಕಲ್ಪಿಸಿದ್ದು, ಕಾಂಗ್ರೆಸ್ ಪಕ್ಷದ ಸಿದ್ಧಾಂತದಂತೆ ಸರ್ವರಿಗೂ ಸಮಪಾಲು ಸಮಬಾಳು ನೀಡುವ ಆಶಯವನ್ನು ಹೊಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.
     ಬೃಹತ್ ಗಾತ್ರದ ಬಜೆಟ್ನಲ್ಲಿ ಕಾಂಗ್ರೆಸ್ ಪಕ್ಷವು ನೀಡಿರುವ ಗ್ಯಾರಂಟಿಗಳಿಗೆ ಹಣ ಮೀಸಲಿಡುವ ಮೂಲಕ ನಮ್ಮ ಮಾತನ್ನು ಉಳಿಸಿಕೊಂಡು ರಾಜ್ಯದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಹೇಳಿದ್ದಾರೆ.
     ಸಮಾಜ ಕಲ್ಯಾಣ, ಆಹಾರ, ಕೃಷಿ, ತೋಟಗಾರಿಕೆ, ನೀರಾವರಿ, ಆರೋಗ್ಯ, ಲೋಕೋಪಯೋಗಿ, ಇಂಧನ ಸೇರಿ ಎಲ್ಲ ಇಲಾಖೆಗಳಿಗೂ ಶಕ್ತಿ ತುಂಬಿದ್ದು, ದಾವಣಗೆರೆ ಜಿಲ್ಲೆಯ ಹಲವು ಸಮಸ್ಯೆಗಳ ಪರಿಹಾರಕ್ಕೆ ಬಜೆಟ್ನಲ್ಲಿ ಹಣ ತೆಗೆದಿರಿಸಿದ್ದಾರೆ ಎಂದಿದ್ದಾರೆ.
     ದಾವಣಗೆರೆ ಸೇರಿ 6 ಜಿಲ್ಲೆಗಳಲ್ಲಿಅತ್ಯಾಧುನಿಕ ಕೌಶಲ ಪ್ರಯೋಗಾಲಯ, ಅಲ್ಪಸಂಖ್ಯಾತ ಯುವಕರಿಗಾಗಿ ಕೌಶಲ ತರಬೇತಿ ಕೇಂದ್ರ ಹಾಗೂ ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಳ ಮಾಡುವ ಉದ್ದೇಶದಿಂದ ರೂಪಿಸಿರುವ ಕೆರೆಗಳನ್ನು ತುಂಬಿಸುವ ಯೋಜನೆಗೂ ಬಜೆಟ್ನಲ್ಲಿ ಹಣ ತೆಗೆದಿರಿಸಲಾಗಿದ್ದು, ಒಟ್ಟಾರೆ ಸಿದ್ದರಾಮಯ್ಯ 14ನೇ ಬಾರಿ ಮಂಡಿಸಿರುವ ಬಜೆಟ್ ಸ್ವಾಗತಾರ್ಹವಾಗಿದ್ದು ಜನರ ಪರವಾಗಿದೆ ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts