More

    ಜನತೆಗೆ ಸೌಲಭ್ಯ ತಲುಪಿಸಲು ಪತ್ರಕರ್ತರ ಕಾರ್ಯ ಪ್ರಮುಖ

    ದಾವಣಗೆರೆ : ಸರ್ಕಾರದ ಯೋಜನೆ ಹಾಗೂ ಮೂಲಸೌಲಭ್ಯಗಳನ್ನು ಜನತೆಗೆ ಸಮರ್ಪಕವಾಗಿ ತಲುಪಿಸಲು ಪತ್ರಕರ್ತರ ಕಾರ್ಯ ಅತ್ಯಂತ ಪ್ರಮುಖವಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.
     ಮಹಾನಗರ ಪಾಲಿಕೆ ಆವರಣದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೀಡಲಾದ ಕಾರ್ಯಾಲಯವನ್ನು ಬುಧವಾರ ಉದ್ಘಾಟಿಸಿ ನಾಮಫಲಕ ಅನಾವರಣಗೊಳಿಸಿ ಮಾತನಾಡಿದರು.
     ಪತ್ರಿಕಾರಂಗವು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದೆ. ಪತ್ರಕರ್ತರು ಪರಸ್ಪರ ಸಹಕಾರ ದಿಂದ  ಕೆಲಸ ನಿರ್ವಹಿಸಿದರೆ ಸಂವಿಧಾನದ ಮೂಲ ಆಶಯ ಈಡೇರಿಸಲು ಸಾಧ್ಯ. ಸರ್ಕಾರದ ಕೆಲಸ ಕಾರ್ಯಗಳಿಗೆ ಪ್ರಚಾರ ನೀಡಿ ಸಹಕರಿಸಬೇಕು ಎಂದರು.
     ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ, ರಾಜ್ಯದ ಬೇರೆ-ಬೇರೆ ಜಿಲ್ಲೆಗಳಲ್ಲಿ ಸುಸಜ್ಜಿತ ಪತ್ರಿ ಕಾ ಭವನಗಳಿವೆ. ದಾವಣಗೆರೆಯಲ್ಲೂ  ಭವನ ನಿರ್ಮಾಣಗೊಳ್ಳಲಿ. ಕಾರ್ಯನಿರತ ಪತ್ರಕರ್ತರ ಸಂಘದ ಚಟುವಟಿಕೆಗಳಿಗೆ ಅನುಕೂಲವಾಗಲು ಪಾಲಿಕೆಯಿಂದ ತಾತ್ಕಾಲಿಕ ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
     ಅಧ್ಯಕ್ಷತೆ ವಹಿಸಿದ್ದ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ್  ಮಾತನಾಡಿ, ಪತ್ರಿಕಾ ಭವನ ನಿರ್ಮಾಣಕ್ಕೆ ನಿವೇಶನ ಕೋರಿ ಈಗಾಗಲೇ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಲಾಗಿದೆ. ಜಿಲ್ಲಾಡಳಿತ ನಿವೇಶನ ಮಂಜೂರು ಮಾಡಬೇಕು ಎಂದು ಕೋರಿದರು.
     ರಾಜ್ಯದಲ್ಲಿ ಸುಮಾರು 8 ಸಾವಿರ ಸದಸ್ಯರನ್ನು ಹೊಂದಿರುವ ಕಾರ್ಯನಿರತ ಪತ್ರಕರ್ತರ ಸಂಘವು ಪತ್ರಕರ್ತರ ಅಧಿಕೃತ ಸಂಘಟನೆಯಾಗಿದೆ. ಬರುವ ನವೆಂಬರ್,ಡಿಸೆಂಬರ್‌ನಲ್ಲಿ ನಗರದಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
     ವರದಿಗಾರರ ಕೂಟದ ಜಿಲ್ಲಾಧ್ಯಕ್ಷ ಕೆ. ಏಕಾಂತಪ್ಪ ಮಾತನಾಡಿ, ನಗರದಲ್ಲಿ ಸುಮಾರು 15 ವರ್ಷಗಳಿಂದ ವರದಿಗಾರರ ಕೂಟವು ಕಾರ್ಯ ನಿರ್ವಹಿಸುತ್ತಿದ್ದು ನಿವೇಶನದ ಅಗತ್ಯವಿದೆ. ವರದಿಗಾರರ ಕೂಟ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘ ಎರಡೂ ಸಂಘಟನೆಗಳಿಗೆ ಜಿಲ್ಲಾಡಳಿತದಿಂದ ನಿವೇಶನ ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.
     ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್, ಉಪ ಮೇಯರ್ ಯಶೋದಾ, ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಕೆ. ಚಂದ್ರಣ್ಣ, ರಾಷ್ಟ್ರೀಯ ಮಂಡಳಿ ಸದಸ್ಯ ಎಸ್.ಕೆ. ಒಡೆಯರ್, ವಾರ್ತಾಧಿಕಾರಿ ಧನಂಜಯ್ ಇತರರು ಉಪಸ್ಥಿತರಿದ್ದರು.
     ಈ ಸಂದರ್ಭದಲ್ಲಿ ಸಂಘಕ್ಕೆ ನಿವೇಶನ, ಕಾರ್ಯಾಲಯಕ್ಕೆ ಪೀಠೋಪಕರಣ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿ, ಮೇಯರ್ ಹಾಗೂ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
     ಸಂಘದ ಪ್ರಧಾನ ಕಾರ್ಯದರ್ಶಿ ಫಕೃದ್ಧೀನ್ ಸ್ವಾಗತಿಸಿದರು. ಖಜಾಂಚಿ ಎನ್.ವಿ. ಬದರಿನಾಥ್ ವಂದಿಸಿದರು. ವೇದಮೂರ್ತಿ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts