More

    ಸುಡಾನ್‌ನಿಂದ ಭಾರತೀಯರ ಸುರಕ್ಷಿತ ವಾಪಸಾತಿಗೆ ಕ್ರಮ

    ದಾವಣಗೆರೆ : ಸುಡಾನ್ ದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಡಿಗೆ ಕರೆತರಲಾಗುವುದು ಎಂದು, ಕೇಂದ್ರದ ಬಂದರು ಖಾತೆ ಸಚಿವ ಸರ್ಬಾನಂದ ಸೋನೋವಾಲ್ ಹೇಳಿದರು.
     ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಷ್ಯಾ ಮತ್ತು ಯುಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯತ್ನದ ಫಲವಾಗಿ ಯಶಸ್ವಿಯಾಗಿ ಕರೆತರಲಾಗಿತ್ತು. ಸುಡಾನ್ ವಿಚಾರದಲ್ಲೂ ಆ ಪ್ರಯತ್ನ ಸಾಗಿದೆ ಎಂದರು.
     ನವ ಮಂಗಳೂರು ಬಂದರು ಆಧುನೀಕರಣದತ್ತ ಹೆಜ್ಜೆ ಇಟ್ಟಿದ್ದೇವೆ. ಸೌರ ಶಕ್ತಿಯನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸಾಗರ್‌ಮಾಲಾ ಯೋಜನೆಯಡಿ ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರಲಾಗಿದೆ. ಇದರ ಫಲವಾಗಿ ಆ ಬಂದರು ಲಾಭದಲ್ಲಿದ್ದು ಕಳೆದ ವರ್ಷ ಶೇ 10.5 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ ಎಂದು ಮಾಹಿತಿ ನೀಡಿದರು.
     ಆಯುಷ್ಮಾನ್ ಭಾರತ್ ಯೋಜನೆಯಿಂದ ದೇಶದ 50 ಕೋಟಿ ಜನರಿಗೆ ಲಾಭವಾಗಿದೆ ಎಂದು ತಿಳಿಸಿದರು.
     ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ಉನ್ನತಿ ಬಿಜೆಪಿ ಸರ್ಕಾರದ ಸಾಧನೆಯಾಗಿದೆ. ಜಗತ್ತಿನಲ್ಲಿ 11ನೇ ಸ್ಥಾನದಲ್ಲಿದ್ದ ಭಾರತ ಈಗ ವಿಶ್ವದ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆದಿದೆ. ಕಳೆದ 9 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡ ಕ್ರಮಗಳಿಂದ ಇದು ಸಾಧ್ಯವಾಗಿದೆ ಎಂದರು.
     ಬಿಜೆಪಿಯಿಂದ ಸಮಗ್ರ ಅಭಿವೃದ್ಧಿ ಸಾಧ್ಯ. 55 ವರ್ಷ ವಿಫಲ ಆಡಳಿತ ನೀಡಿದ ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡಲು ನೈತಿಕ ಹಕ್ಕಿಲ್ಲ. ರಾಜ್ಯದ ಜನರು ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮನಗಂಡಿದ್ದಾರೆ ಎಂದು ತಿಳಿಸಿದರು.
     ದಾವಣಗೆರೆಯಲ್ಲಿ ವಿಮಾಣ ನಿಲ್ದಾಣ ನಿರ್ಮಾಣವಾಗಲಿದೆ. ರೈಲ್ವೆ ಮಾರ್ಗದ ಡಬ್ಲಿಂಗ್ ಸೇರಿ ಮೂಲಸೌಲಭ್ಯಕ್ಕೆ ಒತ್ತು ಕೊಡಲಾಗಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts