More

    ಮಕ್ಕಳಿಗೆ ಕಡ್ಡಾಯವಾಗಿ ಹಾಕಿಸಿ ಲಸಿಕೆ

    ದಾವಣಗೆರೆ : ಮಿಷನ್ ಇಂದ್ರಧನುಷ್ 0.5 ಅಭಿಯಾನದ ಎರಡನೇ ಹಂತ ಆರಂಭವಾಗುತ್ತಿದ್ದು ಲಸಿಕೆಗಳನ್ನು ಹಾಕಿಸದಿರುವ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್.ಸಿ.ಎಚ್ ಅಧಿಕಾರಿ ಡಾ. ರೇಣುಕಾ ಆರಾಧ್ಯ ತಿಳಿಸಿದರು.
     ಭಾರತ್ ಕಾಲನಿ 9ನೇ ಕ್ರಾಸ್ ಸೇವಾಲಾಲ್ ದೇವಸ್ಥಾನದಲ್ಲಿ ಗುರುವಾರ ಪೋಷಣ್ ಅಭಿಯಾನ ಯೋಜನೆಯಡಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
     ಪೌಷ್ಟಿಕ ಆಹಾರದ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶ. ಆರೋಗ್ಯ ರಕ್ಷಣೆಗೆ ಅಗತ್ಯವಾದ ಆಹಾರ ಸೇವಿಸಬೇಕು. ಹೆಣ್ಣು ಮಕ್ಕಳಿಗೆ 21 ವರ್ಷ ತುಂಬಿದ ನಂತರವೇ ಮದುವೆ ಮಾಡಬೇಕು ಎಂದು ತಿಳಿಸಿದರು.
     ತಾಲೂಕು ವೈದ್ಯಾಧಿಕಾರಿ ಡಾ. ದೇವರಾಜ್ ಮಾತನಾಡಿ ಗರ್ಭಿಣಿಯರಿಗೆ ಹಿಮೊಗ್ಲೋಬಿನ್ 10 ಗ್ರಾಂ ಇರಬೇಕು, ಐರನ್ ಮತ್ತು ಕ್ಯಾಲ್ಸಿಯಂ ಮಾತ್ರೆಗಳನ್ನು ಸಮಯಕ್ಕೆ ಸರಿಯಾಗಿ ತೆಗಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
     ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯದರ್ಶಿನಿ ಮಾತನಾಡಿ ಪೋಷಣ್ ಅಭಿಯಾನ ಯೋಜನೆಯು 2018 ರಲ್ಲಿ ಪ್ರಾರಂಭವಾಗಿದೆ. ಈ ಯೋಜನೆಯಡಿ ಅಪೌಷ್ಟಿಕ ಮಕ್ಕಳನ್ನು ಎನ್.ಆರ್.ಸಿ ಕೇಂದ್ರಕ್ಕೆ 14 ದಿನ ದಾಖಲಿಸಲಾಗುವುದು. ಸ್ತನ್ಯಪಾನ ಸಪ್ತಾಹ, ಸಮುದಾಯ ಆಧಾರಿತ ಚಟುವಟಿಕೆಗಳನ್ನು ಮಾಡುವ ಮೂಲಕ ಜನರಿಗೆ ಅರಿವು ಮೂಡಿಸುತ್ತೇವೆ ಎಂದು ತಿಳಿಸಿದರು.
     ಮಕ್ಕಳ ತಜ್ಞೆ ಡಾ. ಚೈತಾಲಿ ಎನ್.ಎಸ್. ಮಾತನಾಡಿ  ಗರ್ಭಿಣಿಯರ ಪೌಷ್ಟಿಕತೆ ಮಟ್ಟದ ಆಧಾರದ ಮೇಲೆ  ಹುಟ್ಟುವ ಮಗುವಿನ ಆರೋಗ್ಯ ಹಾಗೂ ಪೌಷ್ಟಿಕತೆ ಮಟ್ಟ ನಿರ್ಧಾರವಾಗುತ್ತದೆ. ರಕ್ತ ಹೀನತೆಯು ಗರ್ಭಿಣಿ, ಬಾಣಂತಿ ಹಾಗೂ ಕಿಶೋರಿಯರಲ್ಲಿ ಜ್ವಲಂತ ಸಮಸ್ಯೆಯಾಗಿದೆ. ಪ್ರತಿ ದಿನ ಸಮತೋಲನ ಆಹಾರವನ್ನು ಸೇವಿಸುವುದರಿಂದ ಮಾತ್ರ ರಕ್ತ ಹೀನತೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು ಎಂದರು.
     ಆರೋಗ್ಯವಂತ ಮಗು ಹೇಗಿರಬೇಕು ಎನ್ನುವ ಬಗ್ಗೆ ಉಮಾಪತಿ ಎಚ್, ಗರ್ಭಿಣಿಯರು ಸೇವಿಸಬೇಕಾದ ಆಹಾರಗಳ ಕುರಿತು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೆಂಕಟಚಲಕುಮಾರ್ ಪಿ.ಎಸ್ ವಿವರಿಸಿದರು.
     ಕಾರ್ಯಕ್ರಮದಲ್ಲಿ ವಿಶೇಷವಾಗಿ ಆಯೋಜಿಸಲಾಗಿದ್ದ ವಿವಿಧ ಆಹಾರ ಪದಾರ್ಥಗಳಿಂದ ತಯಾರಿಸಿದ ಪೌಷ್ಟಿಕ ಆಹಾರ ಪದಾರ್ಥಗಳ ಪದರ್ಶನ, ಗರ್ಭಿಣಿಯರಿಗೆ ಸೀಮಂತ ಕಾರ್ಯ ಹಾಗೂ ಆರೋಗ್ಯವಂತ ಮಕ್ಕಳಿಗೆ ಬೇಬಿ ಶೋ ಕಾರ್ಯಕ್ರಮವನ್ನು ಏರ್ಪಡಿಸಿ ಪ್ರಶಸ್ತಿಗಳನ್ನು ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಸುಧಾ ಮಕರಿ ಮತ್ತು ಕವಿತಾ ಅನ್ವೇರಿ  ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts