More

    ನಕಲಿ ದಾಖಲೆ ನೀಡಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ; 12 ಎಂಎಲ್‌ಸಿಗಳಿಗೆ ಜಿಲ್ಲಾಧಿಕಾರಿ ನೋಟಿಸ್ ಜಾರಿ

    ದಾವಣಗೆರೆ: ನಕಲಿ ದಾಖಲೆಗಳನ್ನು ನೀಡಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸಿದ ಆರೋಪದ ಮೇಲೆ 12 ಎಂಎಲ್‌ಸಿಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ನೋಟಿಸ್ ಜಾರಿ ಮಾಡಿದ್ದಾರೆ.

    ಎಂಎಲ್‌ಸಿಗಳು ನೀಡಿದ ವಿಳಾಸದಲ್ಲಿ ವಾಸವಾವಿಲ್ಲದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಇಂದು ಸಂಜೆ 5 ಗಂಟೆಯೊಳಗೆ ಅಗತ್ಯ ದಾಖಲೆಗಳೊಂದಿಗೆ ಇ-ಮೇಲ್ ಅಥವಾ ಖುದ್ದು ಹಾಜರಾಗಲು ನೋಟಿಸ್​ನಲ್ಲಿ ಸೂಚಿಸಲಾಗಿದೆ.

    ತಪ್ಪಿದ್ದಲ್ಲಿ ತಮ್ಮ ಸಮಜಾಯಿಷಿ ಇಲ್ಲವೆಂದು ಪರಿಗಣಿಸಿ ಪ್ರಜಾಪ್ರತಿನಿಧಿ ಕಾಯ್ದೆಯಡಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ನೋಟಿಸ್​ನಲ್ಲಿ ತಿಳಿಸಲಾಗಿದೆ.

    ಮೇಯರ್ ಚುನಾವಣೆ ಉದ್ದೇಶಕ್ಕಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ದಾವಣಗೆರೆ ಮಹಾನಗರಪಾಲಿಕೆ ಚುನಾವಣೆ ನಾಳೆ ನಡೆಯಲಿದ್ದು, ಜಿಲ್ಲಾಡಳಿತ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಚುನಾವಣಾ ನಡೆಯುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts