More

    ಬೆಳೆ ಹಾನಿ ಪರಿಹಾರ ನೀಡಲು ಅಗತ್ಯ ಕ್ರಮ

    ದಾವಣಗೆರೆ : ಮುಂಗಾರುಪೂರ್ವ ಮಳೆಯಿಂದ ರಾಜ್ಯದಲ್ಲಿ 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
     ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
     ಬೆಳೆ ಹಾನಿಯ ಸಮೀಕ್ಷೆ ಕೈಗೊಂಡು ವರದಿ ನೀಡುವಂತೆ ಸೂಚಿಸಲಾಗಿದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ನಿಯಮಗಳ ಪ್ರಕಾರ ರೈತರಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
     ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜೂನ್ 9ರಿಂದ ಮುಂಗಾರು ಹಂಗಾಮು ಆರಂಭವಾಗಲಿದೆ. ಕೃಷಿ ಚಟುವಟಿಕೆಗಳು ಚುರುಕಾಗಲಿದ್ದು ರೈತರಿಗೆ ಬಿತ್ತನೆ ಬೀಜ, ಗೊಬ್ಬರ, ಕೀಟನಾಶಕ ಸಕಾಲದಲ್ಲಿ ದೊರೆಯುವಂತೆ ಅಧಿಕಾರಿಗಳು ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
     ರೈತರಿಗೆ ಬೇಕಾಗುವ ಸಮಯಕ್ಕೆ ಕೃಷಿ ಪರಿಕರಗಳನ್ನು ಒದಗಿಸದಿದ್ದರೆ ಇಳುವರಿ ಕುಂಠಿತವಾಗುತ್ತದೆ. ಆದ್ದರಿಂದ ಸಾಕಷ್ಟು ದಾಸ್ತಾನು ಇಟ್ಟುಕೊಳ್ಳಬೇಕು. ಜಿಲ್ಲಾಮಟ್ಟದ ಅಧಿಕಾರಿಗಳು ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಯಾವುದೇ ದೂರು ಬರದಂತೆ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.
     ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗದಿರಲಿ. ಒಂದು ವೇಳೆ ಅಂಥ ಸಂದರ್ಭ ಬಂದರೆ ಎದುರಿಸುವುದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಬೇಕು. ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡಿದಂತೆ ಆಗಬಾರದು ಎಂದು ತಾಕೀತು ಮಾಡಿದರು.
     …
     * ನಾನು ಏಳುವ ಮೊದಲೇ ಏಳ್ತೀರಾ?
     ಇನ್ನೇನು ಸಭೆ ಮುಗಿಯಿತು ಎಂದು ಭಾವಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್, ಹೆಲಿಪ್ಯಾಡ್‌ನತ್ತ ತೆರಳಬೇಕಿದ್ದ ಸಿಎಂಗೆ ಭದ್ರತೆ (ಬೆಂಗಾವಲು) ವ್ಯವಸ್ಥೆ ಮಾಡುವ ಉದ್ದೇಶದಿಂದ ಮೇಲೆದ್ದರು.
     ಇದನ್ನು ತಪ್ಪಾಗಿ ಅರ್ಥೈಸಿಕೊಂಡ ಸಿಎಂ, ‘ನಾನು ಏಳುವ ಮೊದಲೇ ಏಳ್ತೀರಾ?, ನೀವು ಎಸ್ಪಿನಾ?’ ಎಂದು ಆಕ್ಷೇಪ ವ್ಯಕ್ತಪಡಿಸಿದರು.
     ಮಾತು ಮುಂದುವರಿಸಿದ ಸಿದ್ದರಾಮಯ್ಯ, ನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಅವಕಾಶವಿಲ್ಲ, ಅದು ಅನೈತಿಕವಾದುದು ಎಂದು ಹೇಳಿದರು.
     ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಕಾನೂನನ್ನು ಯಾರೂ ಕೈಗೆತ್ತಿಕೊಳ್ಳದಂತೆ ಎಚ್ಚರ ವಹಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
     …

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts