ದಾವಣಗೆರೆ : ಶೈಕ್ಷಣಿಕ ವ್ಯವಸ್ಥೆಯು ಕೇವಲ ಉದ್ಯೋಗ, ಸಂಬಳಕ್ಕೆ ಸೀಮಿತವಾಗದೇ ಸಮಾಜದ ಅಭಿವೃದ್ಧಿಯ ಬಗ್ಗೆಯೂ ಚಿಂತನೆ ನಡೆಸಬೇಕು ಎಂದು ದಾವಣಗೆರೆ ವಿವಿ ಪರೀಕ್ಷಾಂಗ ಕುಲಸಚಿವ ಡಾ. ಸಿ.ಕೆ. ರಮೇಶ ಹೇಳಿದರು. ನಗರದ ಸುಶೀಲಮ್ಮ ಬಂಕಾಪುರದ ಚನ್ನಬಸಪ್ಪ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಅಥಣಿ ಸ್ನಾತಕೋತ್ತರ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಂಡಿದ್ದ 2023-24ನೇ ಸಾಲಿನ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ, ಎನ್‌ಎಸ್‌ಎಸ್ ಘಟಕ ಹಾಗೂ ರೆಡ್‌ಕ್ರಾಸ್ ಘಟಕದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಅಂಕಪಟ್ಟಿಗಳು ಕೇವಲ ಒಂದು ದಾಖಲೆಯಾಗಿ ಬಳಕೆಯಾಗುತ್ತವೆ. ಅವು ಉದ್ಯೋಗ ಒದಗಿಸುವುದಿಲ್ಲ. ಆದರೆ, ವೈಯಕ್ತಿಕ ಕೌಶಲ, ಸಂವಹನ, ನೂತನ ತಂತ್ರಜ್ಞಾನದ ಅರಿವಿದ್ದವರಿಗೆ ಉದ್ಯೋಗವಕಾಶಗಳು ಹೆಚ್ಚು ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗಿರದೆ ಪಠ್ಯೇತರ ಚಟುವಟಿಕೆಗಳಲ್ಲೂ ಛಾಪು ಮೂಡಿಸಬೇಕು. ಆಧುನಿಕತೆಯ ದಿನಮಾನಗಳಲ್ಲಿ ಯುಟ್ಯೂಬ್, ಆನ್‌ಲೈನ್ ಟ್ರೇಡಿಂಗ್ ಕಂಪನಿ, ಬಂಡವಾಳ ಹೂಡಿಕೆ, ಮಾರುಕಟ್ಟೆಯ ಕಲಿಕೆಯಲ್ಲಿ ಪರಿಣತಿ ಹೊಂದುವುದು ಅವಶ್ಯವೆಂದರು. ಪ್ರಶಸ್ತಿ ಪ್ರದಾನ: ಇದೇ ಸಂದರ್ಭದಲ್ಲಿ 2023-24ನೇ ಸಾಲಿನ ದಾವಣಗೆರೆ ವಿವಿಯ ಪದವಿಯಲ್ಲಿ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಮೊದಲನೇ ಸೆಮಿಸ್ಟರ್‌ನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಹಾಗೂ ಹಾಗೂ ಕ್ರೀಡಾ ಸಾಧನೆ ಮೆರೆದ ಎಸ್‌ಬಿಸಿ ಕಾಲೇಜಿನ ಎಂ.ಕಾಂ ವಿಭಾಗದ ವಿದ್ಯಾರ್ಥಿನಿ ಎಲ್. ಮಮತಾ ಅವರಿಗೆ ಸನ್ಮಾನಿಸಲಾಯಿತು. ಎಸ್‌ಬಿಸಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಅಧ್ಯಕ್ಷ ಬಿ.ಸಿ. ಉಮಾಪತಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯರಾದ ಡಾ.ಕೆ. ಷಣ್ಮುಖ, ಡಯಾನಾ, ವಿನಾಯಕ ಎಜುಕೇಷನ್ ಟ್ರಸ್ಟಿ ಅಥಣಿ ಪ್ರಶಾಂತ್, ಎಂ.ಸಿ. ಗುರು ಇತರರಿದ್ದರು.
ಪುರುಷರೇ ಎಡಗೈ, ಮಹಿಳೆಯರ ಬಲ ಅಂಗೈ ತುರಿಕೆಯಾದ್ರೆ ಕಾದಿದೆ ಈ ಗಂಡಾಂತರ!
ಬೆಂಗಳೂರು: ಅಂಗೈ ತುರಿಕೆಯಾಗಿದೆ ಎಂದರೆ ಹಣ ಬರುತ್ತದೆ ಎಂದು ಹಲವರು ಹೇಳುತ್ತಾರೆ. ಕೆಲವರು ಹಣ ಕಳೆದುಕೊಳ್ಳುತ್ತಿದ್ದಾರೆ…
ಈ ದಿನಾಂಕದಂದು ಜನಿಸಿದವರು ಜೀವನದಲ್ಲಿ ರಾಜರಂತೆ ಬದುಕುತ್ತಾರೆ… ನೀವೂ ಇದೇ ದಿನ ಹುಟ್ಟಿದ್ದೀರಾ ನೋಡಿ!
ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…
ಈ ಮೂರು ಕೆಲಸಗಳನ್ನು ಮಾಡಿದ ನಂತರ ಹಲ್ಲುಜ್ಜಬೇಡಿ! ಅನಾರೋಗ್ಯಕ್ಕೊಳಗಾಗುವುದು ಖಂಡಿತ..
ಬೆಂಗಳೂರು: ಬಾಯಿಯನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು ಆರೋಗ್ಯಕ್ಕೆ ಬಹಳ ಮುಖ್ಯ. ಸೂಕ್ಷ್ಮಜೀವಿಗಳು ಬಾಯಿಯ ಮೂಲಕ ಹೊಟ್ಟೆಯನ್ನು ಪ್ರವೇಶಿಸುತ್ತವೆ. ಇದು…