ಎಲ್.ಎಚ್. ಅರುಣ್‌ಕುಮಾರ್ ಹೇಳಿಕೆ  ವಾರ್ಷಿಕೋತ್ಸವ ಕಾರ್ಯಕ್ರಮ  ವಿದ್ಯಾರ್ಥಿಗಳ ಮೇಲೆ ದೇಶದ ಭವಿಷ್ಯ ಅವಲಂಬಿತ  ವಿಜಯವಾಣಿ ಸುದ್ದಿಜಾಲ ದಾವಣಗೆರೆ  ದೇಶದ ಭವಿಷ್ಯ ವಿದ್ಯಾರ್ಥಿಗಳ ಮೇಲೆ ಅವಲಂಬಿತವಾಗಿದೆ. ಹಾಗಾಗಿ, ಇಂದಿನ ಯುವಕರನ್ನು ನೈತಿಕ ಶಿಕ್ಷಣ, ಸಂಸ್ಕಾರ ಮತ್ತು ಸಂಸ್ಕೃತಿಯೊಡನೆ ಹೊಣೆಗಾರಿಕೆಯಿಂದ ರೂಪಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್‌ಕುಮಾರ್ ಹೇಳಿದರು.  ನಗರದ ಕುವೆಂಪು ಕನ್ನಡ ಭವನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಭದ್ರಾ ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದರು.  ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನು ಆಡಳಿತವಿದ್ದು, ಎಲ್ಲರೂ ಕಾನೂನು ಪಾಲಿಸುವ ಮೂಲಕ ಸಂವಿಧಾನದ ಆಶಯದಂತೆ ಸುಸ್ಥಿರ ಸಮಾಜ ನಿರ್ಮಾಣಕ್ಕೆ ಕಟಿಬದ್ಧರಾಗಬೇಕು ಎಂದು ತಿಳಿಸಿದರು.  12ನೇ ಶತಮಾನದ ಬಸವಣ್ಣನವರು ಮಾನವ ಹಕ್ಕು ಪ್ರತಿಪಾದಿಸಿ ಮಾನವತೆ ಸಮಾಜದ ಕನಸನ್ನು ಕಂಡಿದ್ದರು. 1948ರಲ್ಲಿ ಜಾರಿಗೆ ಬಂದ ಮಾನವ ಹಕ್ಕುಗಳು ಪ್ರಪಂಚದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಸಹಕಾರಿಯಾಗಿವೆ ಎಂದರು.  ಹಿರಿಯ ವಕೀಲ ಬಿ.ಎಂ. ಹನುಮಂತಪ್ಪ ಮಾತನಾಡಿ, ಆಧುನಿಕ ಯುವಕರಿಗೆ ಸರಳ ಜೀವನ ಅವಶ್ಯಕವಿದ್ದು, ದೈನಂದಿನ ಜೀವನದ ಕರ್ತವ್ಯ ಅರಿತು ಬಾಳಬೇಕಾಗಿದೆ. ಶಿಕ್ಷಣ ಬದುಕನ್ನು ಹಸನು ಮಾಡುವಂತಿರಬೇಕು. ಎಲ್ಲಕ್ಕಿಂತ ಹೆಚ್ಚಾಗಿ ಆರೋಗ್ಯ ಮತ್ತು ಚಾರಿತ್ರ್ಯ ತುಂಬಾ ಅವಶ್ಯಕ ಎಂದು ಹೇಳಿದರು.  ರಾಜ್ಯ ವಿಶ್ವವಿದ್ಯಾನಿಲಯ ಮತ್ತು ಕಾಲೇಜು ಅಧ್ಯಾಪಕರ ಸಂಘಗಳ ಒಕ್ಕೂಟದ ಮಾಜಿ ಅಧ್ಯಕ್ಷ ಪ್ರೊ.ಸಿ.ಎಚ್. ಮುರುಗೇಂದ್ರಪ್ಪ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸೃಜನಶೀಲ ಮನೋಭಾವನೆ ಅವಶ್ಯಕ. ಬರೀ ಹಕ್ಕುಗಳಿಗೆ ಮಾತ್ರ ಮಹತ್ವ ಕೊಡದೆ, ಕರ್ತವ್ಯಗಳಿಗೂ ಆದ್ಯತೆ ನೀಡಬೇಕು ಎಂದರು.  ಭದ್ರಾ ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ಪ್ರಾಚಾರ್ಯ ಪ್ರೊ.ಟಿ. ಮುರುಗೇಶ್ ಅಧ್ಯಕ್ಷತೆ ವಹಿಸಿದ್ದರು.  ಭದ್ರಾ ಎಜುಕೇಷನ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಎಂ. ಸಂಕೇತ್, ಭದ್ರಾ ಪದವಿಪೂರ್ವ ಕಾಲೇಜು, ಪ್ರಾಚಾರ್ಯ ಡಿ. ಚಂದ್ರಪ್ಪ ಇದ್ದರು.  ಈ ವೇಳೆ 2022-23ನೇ ಸಾಲಿನ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ನೀಡಲಾಯಿತು. ಸಂಜಯ್ ಕುಮಾರ್ ಸ್ವಾಗತಿಸಿದರೆ, ಕೆ.ಎನ್. ಪ್ರಜ್ವಲ್ ನಿರೂಪಿಸಿದರು. ರಂಜಿತಾ ವಂದಿಸಿದರು.

Share This Article

ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್‌ ಬರೋದು ಪಕ್ಕಾ! ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…

ಮಕ್ಕಳಿಗೆ ಬಾಳೆಹಣ್ಣು ಕೊಡುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ ಇಲ್ಲದಿದ್ರೆ ಆರೋಗ್ಯ ಕೆಡಬಹುದು ಎಚ್ಚರ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…

ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…