More

    ಸಾಧನೆಗೆ ಛಲವೇ ಯಶಸ್ಸಿನ ಮೆಟ್ಟಿಲು

    ದಾವಣಗೆರೆ: ಛಲವಿದ್ದರೆ ಜೀವನದಲ್ಲಿ ಏನು ಬೇಕಾದರೂ ಸಾಧಿಸಬಹುದು ಎಂದು ಕೌಶಲಾಭಿವೃದ್ಧಿ ಅಧಿಕಾರಿ ಬಸನಗೌಡ ವಿದ್ಯಾರ್ಥಿಗಳಿಗೆ ಹೇಳಿದರು.
     ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಯೋಗದಲ್ಲಿ ನಗರದ ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಜಿ.ಎಂ. ಹಾಲಮ್ಮ ಸಭಾಂಗಣದಲ್ಲಿ ಸೋಮವಾರ, ಕರ್ನಾಟಕ ಆಡಳಿತ ಸೇವೆ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
     ಈ 9 ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ನಿಷ್ಠೆ ಮತ್ತು ಶ್ರದ್ಧೆಯಿಂದ ಭಾಗವಹಿಸಿ ಮುಂಬರುವ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಿ ಉತ್ತೀರ್ಣರಾಗುವಂತೆ ತಿಳಿಸಿದರು.
     ಕಾಲೇಜಿನ ಪ್ರಾಚಾರ್ಯ ಡಾ. ಎಂ.ಬಿ. ಸಂಜಯ್ ಪಾಂಡೆ ಮಾತನಾಡಿ, ಕಾಲೇಜಿನಲ್ಲಿರುವ ಮೂಲ ಸೌಕರ್ಯಗಳನ್ನು ಉಪಯೋಗಿಸಿಕೊಂಡು ತರಬೇತಿಯ ಪ್ರಯೋಜನ ಪಡೆಯುವಂತೆ ಸಲಹೆ ನೀಡಿದರು.
     ಈ ತರಬೇತಿ ಕಾರ್ಯಕ್ರಮಕ್ಕೆ ವಿವಿಧ ವಿಷಯವಾರು ತಜ್ಞರು ಆಗಮಿಸಲಿದ್ದು ವಿದ್ಯಾರ್ಥಿಗಳಿಗೆ ಪರೀಕ್ಷೆ ಪೂರ್ವ ತರಬೇತಿ ನೀಡಲಿದ್ದಾರೆ ಎಂದು ಉದ್ಯೋಗ ಅಧಿಕಾರಿ ಡಿ. ರವೀಂದ್ರ ತಿಳಿಸಿದರು.
     ಕಾಲೇಜಿನ ಆಡಳಿತ ಅಧಿಕಾರಿ ವೈ.ಯು. ಸುಭಾಷ್ ಚಂದ್ರ, ಎಂಬಿಎ ವಿಭಾಗದ ಮುಖ್ಯಸ್ಥ ಡಾ.ಪಿ.ಎಸ್. ಬಸವರಾಜು, ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥ ಟಿ.ಆರ್. ತೇಜಸ್ವಿ ಕಟ್ಟಿಮನಿ, ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ವಿದ್ಯಾರ್ಥಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts