More

    ಪತ್ರಕರ್ತರ ರಾಜ್ಯಮಟ್ಟದ 38ನೇ ಸಮ್ಮೇಳನಕ್ಕೆ ಚಾಲನೆ

    ದಾವಣಗೆರೆ: ಪತ್ರಕರ್ತರ ರಾಜ್ಯಮಟ್ಟದ 38ನೇ ಸಮ್ಮೇಳನಕ್ಕೆ ಬೆಣ್ಣೆನಗರಿ ದಾವಣಗೆರೆಯಲ್ಲಿ ಶನಿವಾರ ಚಾಲನೆ ದೊರೆಯಿತು.
     ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವ, ಜಿಲ್ಲಾ ಘಟಕದ ಆತಿಥ್ಯ ಹಾಗೂ ಜಿಲ್ಲಾ ವರದಿಗಾರರ ಕೂಟದ ಸಹಯೋಗದಲ್ಲಿ ನಗರದ ಹದಡಿ ರಸ್ತೆಯಲ್ಲಿರುವ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ಸಮ್ಮೇಳನಕ್ಕೆ ನಾಡಿನ ವಿವಿಧೆಡೆಯಿಂದ ಆಗಮಿಸಿರುವ ಸಹಸ್ರಾರು ಪತ್ರಕರ್ತರು ಸಾಕ್ಷಿಯಾಗಿದ್ದಾರೆ.
     ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಸಚಿವರಾದ ರಾಮಲಿಂಗಾರೆಡ್ಡಿ, ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕರಾದ ಡಾ. ಶಾಮನೂರು ಶಿವಂಶಕರಪ್ಪ, ಕೆ.ಎಸ್. ಬಸವಂತಪ್ಪ ಇನ್ನಿತರ ಜನಪ್ರತಿನಿಧಿಗಳು, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು. ಇದೇ ವೇಳೆ ಸಾಧಕ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
     ‘ಕೃತಕ ಬುದ್ಧಿಮತ್ತೆ ಮತ್ತು ಮಾಧ್ಯಮಗಳ ಭವಿಷ್ಯ’, ‘ಸ್ಥಳೀಯ ಪತ್ರಿಕೆಗಳು : ಹಿಂದೆ-ಇಂದು-ಮುಂದು’ ವಿಷಯಗಳ ಕುರಿತು ಗೋಷ್ಠಿಗಳು ನಡೆದವು. ಹಿರಿಯ ಪತ್ರಕರ್ತರು ಭಾಗವಹಿಸಿದ್ದರು.
     ಬೆಳಗ್ಗೆ ಜಯದೇವ ವೃತ್ತದಿಂದ ಆರಂಭವಾದ ಮೆರವಣಿಗೆಗೆ ಮೇಯರ್ ವಿನಾಯಕ ಪೈಲ್ವಾನ್ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಸಾಗಿದ ‘ಮಾಧ್ಯಮ ವೃಕ್ಷ’ ಎಲ್ಲರನ್ನು ಆಕರ್ಷಿಸಿತು. ಬೃಹತ್ ಆಲದ ಮರದ ರೆಂಬೆ-ಕೊಂಬೆಗಳು ಹಾಗೂ ಬಿಳಲುಗಳಲ್ಲಿ ರಾಜ್ಯದ ಪತ್ರಿಕೆಗಳ ಹೆಸರುಗಳು ರಾರಾಜಿಸಿದವು. ಕಲಾ ತಂಡಗಳು ಮೆರುಗು ನೀಡಿದವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts