More

  ಕನಕದಾಸರ ಸಾಮಾಜಿಕ ಚಿಂತನೆ ಇಂದಿಗೂ ಆದರ್ಶ

  ದಾವಣಗೆರೆ : ಹದಿನಾರನೇ ಶತಮಾನದಲ್ಲಿದ್ದ ಕನಕದಾಸರ ಸಾಮಾಜಿಕ ಚಿಂತನೆ ಮತ್ತು ಸಮಾನತೆ ಇಂದಿಗೂ ಆದರ್ಶಪ್ರಾಯವಾಗಿವೆ ಎಂದು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹೇಳಿದರು.
   ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
   ಕನಕದಾಸರು 316 ಕೀರ್ತನೆಗಳನ್ನು ರಚಿಸಿದ್ದಾರೆ. ಅವುಗಳಲ್ಲಿ ಭಕ್ತಿ ಪಾರಮ್ಯವನ್ನು ಕಾಣಬಹುದು. ಅವರ ಸಂದೇಶ ನೇರ ಮತ್ತು ಖಚಿತವಾಗಿವೆ. ಅವರ ಕೃತಿಗಳಲ್ಲಿ ಕನ್ನಡ ಮತ್ತು ಸಂಸ್ಕೃತ ಸಾಹಿತ್ಯಗಳ ಪರಿಚಯವಿದೆ ಎಂದು ತಿಳಿಸಿದರು.
   ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, ವೀರಶೈವ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ‌್ಯದರ್ಶಿ ದಿನೇಶ್ ಕೆ.ಶೆಟ್ಟಿ, ಮುಖಂಡರಾದ ಎಸ್.ಮಲ್ಲಿಕಾರ್ಜುನ್, ಅಯೂಬ್ ಪೈಲ್ವಾನ್, ಕವಿತಾ ಚಂದ್ರಶೇಖರ್, ದಾಕ್ಷಾಯಿಣಮ್ಮ, ರಾಜೇಶ್ವರಿ, ಬಾತಿ ಶಿವಕುಮಾರ್, ರಾಕೇಶ್, ಉಮೇಶ್ ಶೆಟ್ಟಿ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts