More

    ಕುಮಾರಸ್ವಾಮಿ ಹೇಳಿಕೆ ಖಂಡಿಸಿ ಪ್ರತಿಭಟನೆ

    ದಾವಣಗೆರೆ: ಮಹಿಳೆಯರ ಕುರಿತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.
     ನಗರದ ಜಯದೇವ ವೃತ್ತದಲ್ಲಿ ನೆರೆದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಕುಮಾರಸ್ವಾಮಿ ವಿರುದ್ಧ ಪ್ಲೇ ಕಾರ್ಡ್ ಪ್ರದರ್ಶಿಸಿ ಗೋ ಬ್ಯಾಕ್ ಎಂದು ಘೋಷಣೆ ಕೂಗಿದರು.
     ಗ್ಯಾರಂಟಿ ಯೋಜನೆಗಳಿಂದ ಲಕ್ಷಾಂತರ ಮಹಿಳೆಯರ ಬದುಕಿಗೆ ಭದ್ರತೆ ದೊರೆಕಿದೆ. ತಾಯಂದಿರು ದಾರಿ ತಪ್ಪಿದ್ದಾರೆಂದರೆ ಏನು ? ಕುಮಾರಸ್ವಾಮಿ ಬಿಜೆಪಿ ಜತೆ ಸೇರಿ ಮನುವಾದಿಯಾಗಿ ಮಹಿಳಾ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
     ಗೃಹಲಕ್ಷ್ಮಿಯೋಜನೆಯಿಂದ ಬಡ ಕುಟುಂಬಗಳು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಸಾಧ್ಯವಾಗುತ್ತಿದೆ, ದುಡಿಯುವ ಹೆಣ್ಣು ಮಕ್ಕಳಿಗೆ ಶಕ್ತಿ ಯೋಜನೆ ಆಸರೆಯಾಗಿದೆ. ಅನ್ನ ಭಾಗ್ಯದಿಂದ ಹಸಿವು ನೀಗುತ್ತಿದೆ. ಇವು ಮಾನವೀಯ ಯೋಜನೆಗಳಾಗಿವೆ ಎಂದು ಹೇಳಿದರು.
     ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಇಂತಹ ಕೆಲಸ ಮಾಡಲಾಗದೆ ಇದೀಗ ಒಳ್ಳೆಯ ಯೋಜನೆಗಳ ಬಗ್ಗೆ ಕೀಳಾಗಿ ಮಾತನಾಡುವುದು ಶೋಭೆ ತರುವುದಿಲ್ಲ. ಕೂಡಲೇ ರಾಜ್ಯದ ಮಹಿಳೆಯರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.
     ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್, ದಾಕ್ಷಾಣಯಮ್ಮ, ಮಾಜಿ ಮೇಯರ್ ಅಶ್ವಿನಿ ಪ್ರಶಾಂತ್, ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕವಿತಾ ಚಂದ್ರಶೇಖರ್, ಕಾವ್ಯಾ, ಸಲ್ಮಾ, ರಾಜೇಶ್ವರಿ, ಶುಭಮಂಗಳಾ, ಉಮಾ ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಬಿ.ಎಚ್. ವೀರಭದ್ರಪ್ಪ, ಕೆ.ಜಿ. ಶಿವಕುಮಾರ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts