More

    ಮಾಯಕೊಂಡ ನೀರಾವರಿ ಕ್ಷೇತ್ರವಾಗಿಸಲು ಒತ್ತು

    ದಾವಣಗೆರೆ : ಮಾಯಕೊಂಡ ಕ್ಷೇತ್ರವನ್ನು ನೀರಾವರಿ ಪ್ರದೇಶವನ್ನಾಗಿ ಮಾಡಲು ಹೆಚ್ಚಿನ ಒತ್ತು ನೀಡಲಾಗುವುದು. ಈಗಾಗಲೇ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು 22  ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರುಣಿಸುವ ಕೆಲಸ ಮಾಡಿದ್ದು, ಇನ್ನು ಹೆಚ್ಚಿನ ಕೆಲಸ ಮಾಡಲು ಈಗಾಗಲೇ ರೂಪುರೇಷೆ ತಯಾರಿಸಲಾಗಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
     ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲೋಕಿಕೆರೆ, ಶ್ಯಾಗಲೆ, ಹೂವಿನಮಡು, ಗೋಣಿವಾಡ, ಮತ್ತಿ, ಕದರನಹಳ್ಳಿ, ಅರೇಹಳ್ಳಿ, ತ್ಯಾವಣಿಗಿ, ಮಿಯಾಪುರ ಗೋಮಾಳ, ನಲ್ಕುದುರೆ ಗೋಮಾಳ, ಅಶೋಕ ನಗರ ಕ್ಯಾಂಪ್, ನಲ್ಕುದುರೆ, ನವಿಲೇಹಾಳ್, ದೊಡ್ಡಘಟ್ಟ, ಕಬ್ಬಳ, ಸೇವಾನಗರ, ಮಧುರನಾಯಕನಹಳ್ಳಿ, ಗುಡ್ಡದ ಕೊಮಾರನಹಳ್ಳಿ, ಹಾಲೇಶಪುರ, ಜಿ.ಬಿ. ಹಳ್ಳಿ, ನೀಲೋಗಲ್, ಕಂಚುಗಾರನಹಳ್ಳಿ ಗ್ರಾಮಗಳಲ್ಲಿ ಶುಕ್ರವಾರ ಚುನಾವಣಾ ಪ್ರಚಾರ ನಡೆಸಿ, ಮಾತನಾಡಿದರು.
     ಲೋಕಸಭಾ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯಲು ಶಿಕ್ಷಣ, ಆರೋಗ್ಯ ಮತ್ತು ನೀರಾವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
     ಕ್ಷೇತ್ರದಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಮತ್ತು ಆರೋಗ್ಯ ಸಿಗಬೇಕಿದ್ದು, ನಮ್ಮ ಟ್ರಸ್ಟ್ ಮೂಲಕವೂ ಈಗಾಗಲೇ ಶಿಕ್ಷಣ ಮತ್ತು ಆರೋಗ್ಯಕ್ಕೆ ಅನೇಕ ಕಾರ್ಯಕ್ರಮ ರೂಪಿಸಲಾಗಿದ್ದು, ಅದನ್ನು ದಾವಣಗೆರೆ ಲೋಕಸಭಾ ಕ್ಷೇತ್ರಾದ್ಯಂತ ವಿಸ್ತರಿಸಲಾಗುವುದು. ಸರ್ಕಾರದಿಂದಲೂ ಶಿಕ್ಷಣ, ಆರೋಗ್ಯ ಮತ್ತು ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದರು.
      ಕೇವಲ 8 ತಿಂಗಳಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರವೊಂದಕ್ಕೆ ಮಾರ್ಚ್ ಅಂತ್ಯಕ್ಕೆ ಸುಮಾರು 98 ಕೋಟಿ ರೂ. ಹಣ ಗ್ಯಾರಂಟಿ ಯೋಜನೆಯ ಮೂಲಕ ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದ ಅವರು, ದಾವಣಗೆರೆ ಜಿಲ್ಲೆಗೆ  ಸಂಸದರ ಕೊಡುಗೆ ಏನು? ಎಂದು ಪ್ರಶ್ನಿಸಿದರು.
     ಪ್ರತಿ ಗ್ರಾಮಗಳಿಗೂ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗುವುದು. ಇದಕ್ಕಾಗಿ ಕೇಂದ್ರದ ಯೋಜನೆ ಬಳಸಿಕೊಂಡು ಈ ಭಾಗದ ಶಾಸಕ ಕೆ.ಎಸ್. ಬಸವಂತಪ್ಪ ಅವರ ಸಹಕಾರದಿಂದ ಪ್ರತಿ ಮನೆ-ಮನೆಗೂ ನೀರು ಸರಬರಾಜು ಮಾಡಲಾಗುವುದು ಎಂದು ಹೇಳಿದರು.
     ಶಾಸಕ ಕೆ.ಎಸ್. ಬಸವಂತಪ್ಪ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು 5 ಗ್ಯಾರಂಟಿ ಯೋಜನೆ ನೀಡಿದ್ದು, ಇದೀಗ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 5 ನ್ಯಾಯದಡಿ 25 ಗ್ಯಾರಂಟಿಗಳನ್ನು ನೀಡಲಿದೆ ಎಂದರು.
     ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಹನುಮಂತಪ್ಪ, ಬಿ.ಜಿ. ನಾಗರಾಜ್, ಲೋಕಿಕೆರೆ ಪ್ರದೀಪ್, ಬಿ.ಎಚ್. ಹಾಲಪ್ಪ, ಪಿ.ಸಿ. ಗೋವಿಂದಸ್ವಾಮಿ, ಲೋಹಿತ್, ಸುರೇಶ್ ಪೈ, ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.
     —-

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts