More

  ಭಾರತವನ್ನು ಶಕ್ತಿಶಾಲಿ ರಾಷ್ಟ್ರವಾಗಿಸಿದ ರಾಜೀವ್

  ದಾವಣಗೆರೆ : ಭಾರತವನ್ನು ಶಕ್ತಿಶಾಲಿ ರಾಷ್ಟ್ರವನ್ನಾಗಿಸಿದ ಕೀರ್ತಿ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ಹೇಳಿದರು.
   ಜಿಲ್ಲಾ ಕಾಂಗ್ರೆಸ್ ಸಮಿತಿಯ ಇಂಟಕ್ ವಿಭಾಗದಿಂದ ನಗರದ ಎಂಸಿಸಿ ‘ಎ’ ಬ್ಲಾಕ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರ 33 ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಮಾತನಾಡಿದರು.
   ಜನ ಸಾಮಾನ್ಯರ ಕೈಯಲ್ಲಿ ಮೊಬೈಲ್ ಫೋನ್ ಬರಲು ರಾಜೀವ್ ಗಾಂಧಿ ಅವರೇ ಕಾರಣ. ಅತಿ ಕಿರಿಯ ವಯಸ್ಸಿಗೆ ವಿಶ್ವದ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ಭಾರತದ ಪ್ರಧಾನಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದು ಐದು ವರ್ಷಗಳ ಕಾಲ ದೇಶಕ್ಕೆ ಉತ್ತಮ ಆಡಳಿತವನ್ನು ನೀಡಿದರು ಎಂದು ಸ್ಮರಿಸಿದರು.
   ದೇಶಕ್ಕೆ ಹೊಸ ಶಿಕ್ಷಣ ನೀತಿ ಜಾರಿಗೊಳಿಸಿದರು. ಇಡೀ ಪ್ರಪಂಚ ಭಾರತದ ಕಡೆ ತಿರುಗಿ ನೋಡುವಂತೆ ಮಾಡಿದರು. 18 ವರ್ಷದ ಯುವಕರಿಗೆ ಮತದಾನದ ಹಕ್ಕನ್ನು ನೀಡಿದರು. ಮಾಹಿತಿ ತಂತ್ರಜ್ಞಾನದ ಅಭಿವೃದ್ಧಿಯ ಕನಸು ಕಟ್ಟಿಕೊಂಡಿದ್ದ ರಾಜೀವ್ ಗಾಂಧಿ ಅದನ್ನು ಪ್ರಾಮಾಣಿಕವಾಗಿ ಜಾರಿಗೊಳಿಸಿದರು ಎಂದು ತಿಳಿಸಿದರು.
   ಜಿಲ್ಲಾ ಕಾಂಗ್ರೆಸ್ ಸಮಿತಿಯ ಇಂಟಕ್ ವಿಭಾಗದ ಅಧ್ಯಕ್ಷ ಕೆ.ಎಂ. ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಬಿ.ಎಚ್. ಉದಯ ಕುಮಾರ್, ಸಿಂಗ್ರಹಳ್ಳಿ ವಿ. ನೀಲಕಂಠಪ್ಪ, ಶಿವಾನಂದ್, ಗಿರಿಧರ್ ಸತಾಲ್, ಡಿ. ಶಿವಕುಮಾರ್, ಎ. ರಾಜಶೇಖರ್, ನಿಟ್ಟುವಳ್ಳಿ ಡಿ. ಬಸವರಾಜ್, ಮುಬಾರಕ್, ಸುರೇಶ್, ಕುಮಾರ್ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts