ಕಾಂಗ್ರೆಸ್‌ನಿಂದ ಬಿಜೆಪಿ ಕಚೇರಿಗೆ ಮುತ್ತಿಗೆ

ದಾವಣಗೆರೆ : ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆ ಮಾಡದಿರುವುದು ಮತ್ತು ಭಾರತ್ ಅಕ್ಕಿ ನೀಡದಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭಾನುವಾರ ಚೊಂಬು ಹಿಡಿದು ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹೇಳಿದರು.  ಬೆಳಗ್ಗೆ 11.30ಕ್ಕೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.  ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವ ಬಗ್ಗೆ ಅದರಲ್ಲಿ ಪ್ರಸ್ತಾಪ ಮಾಡಿಲ್ಲ. ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ, ಚುನಾವಣೆಗೂ ಮುಂಚೆ ಭಾರತ್ ಅಕ್ಕಿಯನ್ನು ಜನರಿಗೆ ವಿತರಿಸುವ ನಾಟಕ ಮಾಡಿದರು. ಚುನಾವಣೆಯ ನಂತರ ಸ್ಥಗಿತಗೊಳಿಸಿದರು ಎಂದು ಹೇಳಿದರು.  ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಸೋಮವಾರ ಭದ್ರಾ ಜಲಾಶಯಕ್ಕೆ ಬಾಗಿನ ಸಲ್ಲಿಸುವ ಕಾರ್ಯಕ್ರಮ ನಿಗದಿಯಾಗಿತ್ತು, ಅದನ್ನು ಮುಂದೂಡಲಾಗಿದ್ದು ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದರು.  ಬಿಜೆಪಿ ಅವಧಿಯಲ್ಲಿ ಅಕ್ರಮ ನಡೆಸಿರುವ ಬಗ್ಗೆ ಅಧಿಕೃತ ದಾಖಲೆಗಳಿದ್ದರೆ ಸಾಬೀತುಪಡಿಸುವಂತೆ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಆಗ್ರಹಿಸಿರುವುದಕ್ಕೆ ಪ್ರತಿಕ್ರಿಯಿಸಿ, ಈ ಹಿಂದೆ ಯಾರು ಯಾರ ಹೆಸರಿಗೆ ನಿವೇಶನ ಪಡೆದಿದ್ದರು ಎನ್ನುವ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.  ದೂಡಾ ಕಚೇರಿಗೆ ದಿನವೂ ಸಾರ್ವಜನಿಕರು ಬಂದು ಅಹವಾಲು ಸಲ್ಲಿಸುತ್ತಿದ್ದಾರೆ. ನಿವೇಶನ, ರಸ್ತೆ ಒತ್ತುವರಿ ತೆರವು ಸೇರಿ ವಿವಿಧ ವಿಷಯಗಳ ಬಗ್ಗೆ ಮನವಿಗಳು ಬರುತ್ತಿವೆ ಎಂದು ತಿಳಿಸಿದರು. ರೈತರು ಜಮೀನು ನೀಡಿದರೆ 50 ಎಕರೆಯಲ್ಲಿ ಬಡಾವಣೆ ನಿರ್ಮಿಸಿ ಬಡವರು, ಮಧ್ಯಮ ವರ್ಗದವರಿಗೆ ನೀಡುವುದಾಗಿ ಪುನರುಚ್ಚರಿಸಿದರು.  ಪಾಲಿಕೆ ಸದಸ್ಯ ಎ. ನಾಗರಾಜ, ಪಕ್ಷದ ಮುಖಂಡರಾದ ಕೆ.ಜಿ. ಶಿವಕುಮಾರ್, ಅಯೂಬ್ ಪೈಲ್ವಾನ್, ಎಸ್. ಮಲ್ಲಿಕಾರ್ಜುನ, ಅಬ್ದುಲ್ ಜಬ್ಬಾರ್, ಮಂಜಮ್ಮ, ಮಂಗಳಮ್ಮ, ಶುಭಮಂಗಳಾ, ರಾಜೇಶ್ವರಿ, ದಾಕ್ಷಾಯಿಣಿ, ಹರೀಶ್, ಯುವರಾಜ್ ಸುದ್ದಿಗೋಷ್ಠಿಯಲ್ಲಿದ್ದರು.    

Share This Article

ಒಂದು ತಿಂಗಳು ಬೇಳೆಕಾಳುಗಳನ್ನು ತಿನ್ನೋದು ಬಿಟ್ಟರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…

ನಿಮ್ಮ ಅಂಗೈನಲ್ಲಿ ಮೀನಿನ ಚಿಹ್ನೆ ಇದ್ರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿಯ ಸಂಗತಿ…

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…