ಬಿಜೆಪಿಗರಿಗೆ ಹಿಂದುತ್ವದ ಬಗ್ಗೆ ಮಾತನಾಡಲು ನೈತಿಕತೆಯಿಲ್ಲ

ದಾವಣಗೆರೆ: ಜಿಲ್ಲೆಯ ಬಿಜೆಪಿ ನಾಯಕರಿಗೆ ಹಿಂದುತ್ವದ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಎಂದು ಕಾಂಗ್ರೆಸ್ ಮುಖಂಡ ಮಟಿಕಲ್ ವೀರಭದ್ರಸ್ವಾಮಿ ಹೇಳಿದರು.  ಹಿಂದುತ್ವದ ಹೆಸರಿನಲ್ಲಿ ರಾಜಕಾರಣ ಮಾಡುವ ಬಿಜೆಪಿ ನಾಯಕರು ಹಿಂದುತ್ವಕ್ಕಾಗಿ ಹೋರಾಡಿದ ಎಷ್ಟು ಜನರಿಗೆ ಉಪಕಾರ ಮಾಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.  ದಾವಣಗೆರೆಯಲ್ಲಿ 1990ರಲ್ಲಿ ನಡೆದ ಗಲಾಟೆ ಸಂದರ್ಭದಲ್ಲಿ ಎಂಟು ಮಂದಿ ಗುಂಡಿಗೆ ಬಲಿಯಾಗಿದ್ದರು. ನೂರಾರು ಮಂದಿ ಗಾಯಗೊಂಡಿದ್ದರು ಸಹ ಯಾರು ಸಹ ಸ್ಪಂದಿಸುವ ಕೆಲಸ ಮಾಡಲಿಲ್ಲ ಎಂದು ದೂರಿದರು.  ನಾಲ್ಕು ಬಾರಿ ಸಂಸದರಾಗಿದ್ದ ಜಿ.ಎಂ.ಸಿದ್ದೇಶ್ವರ, 7 ವರ್ಷ ಜಿಲ್ಲಾ ಸಚಿವರಾಗಿದ್ದ ಎಸ್.ಎ. ರವೀಂದ್ರನಾಥ್, ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಅವರು ಹಿಂದುತ್ವದ ಕೇವಲ ಬಗ್ಗೆ ಮಾತನಾಡುತ್ತಾರೆ. ಧರ್ಮಕ್ಕಾಗಿ ಮಡಿದ ಕುಟುಂಬದವರಿಗೆ ಏನು ಸಹಾಯ ಮಾಡಿದ್ದಾರೆ, ಯಾರಿಗೆ ನಿವೇಶನ ನೀಡಿದ್ದಾರೆ ಎಂದು ಪ್ರಶ್ನಿಸಿದರು.  ಯಾರು ಸಹ ಧರ್ಮದ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ಯುವಕರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಎಂದು ಮನವಿ ಮಾಡಿದರು.  ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಕಾಯಿಪೇಟೆ ಹಾಲೇಶ್, ಕರೂರು ಗಣೇಶಣ್ಣ, ಸಿರಿಗೆರೆ ಬಸವರಾಜ್, ಅಣಜಿ ಬಸವರಾಜ್, ಎಚ್. ರುದ್ರೇಶ್ ಆನೆಕೊಂಡ ಸುದ್ದಿಗೋಷ್ಠಿಯಲ್ಲಿದ್ದರು.  

Share This Article

ಒಂದು ಕೈಯಲ್ಲಿ ಫೋನ್ ಹಿಡಿದುಕೊಂಡು ಸ್ಕ್ರೋಲಿಂಗ್ ಮಾಡ್ತೀರಾ?  ಇದ್ರಿಂದಲೇ ಗೊತ್ತಾಗುತ್ತದೆ ನಿಮ್ಮ Personality traits…

ಬೆಂಗಳೂರು:  ಈಗ  ಕೆಲವು ಅಧ್ಯಯನಗಳು ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು (Personality traits ) ಹುಟ್ಟಿದ ದಿನಾಂಕ, ಕಣ್ಣಿನ…

Salt Water : ಪ್ರತಿದಿನ ಬೆಳಗ್ಗೆ ಉಗುರು ಬೆಚ್ಚನೆಯ ನೀರಿನಲ್ಲಿ ಉಪ್ಪು ಹಾಕಿ ಕುಡಿದರೆ ಏನಾಗುತ್ತೆ ಗೊತ್ತಾ?

ಬೆಂಗಳೂರು: ನಾವು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳುವುದು ತುಂಬಾ…

World Arthritis Day: ಸಂಧಿವಾತ ಕಾಯಿಲೆಗೆ ಚಿಕಿತ್ಸೆಯೇ ಮದ್ದು! ತಜ್ಞವೈದ್ಯೆ ಡಾ. ಅರ್ಚನಾ ಎಂ. ಉಪ್ಪಿನ ಅಭಿಮತ

ಪ್ರಸ್ತುತ ದಿನಗಳಲ್ಲಿ ಬಿಪಿ-ಶುಗರ್ ಸಮಸ್ಯೆಯಂತೆ ಅರ್ಥರೈಟಿಸ್ ( Arthritis ) , ರುಮಾಟಾಲಜಿ (ಸಂಧಿವಾತ/ ಕೀಲುವಾಯು)…

ಈ ಸುದ್ದಿಗಳನ್ನೂ ಮಿಸ್​ ಮಾಡ್ಬೇಡಿ