More

    ಕರೊನಾ ಸೋಂಕಿನಿಂದ ಮಹಿಳೆ ಸಾವು

    ದಾವಣಗೆರೆ: ಜಿಲ್ಲೆಯಲ್ಲಿ ಮಂಗಳವಾರ 12 ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ನಗರದ 50 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

    ಇಲ್ಲಿನ ಎಸ್ಸೆಸ್ಸೆಂ ನಗರದ ಈ ಮಹಿಳೆಯು ಸೋಮವಾರ ಇಲ್ಲಿನ ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಇದರೊಂದಿಗೆ ಜಿಲ್ಲೆಯಲ್ಲಿ ಕರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

    ಹರಿಹರದ ಅಗಸರ ಬೀದಿಯಲ್ಲಿ ಇಬ್ಬರಿಗೆ ಪಾಸಿಟಿವ್ ಬಂದಿದ್ದು, ಆ ಪೈಕಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆಯಿರುವ ಅಲ್ಲಿನ ಗಾಂಧಿನಗರದ 34 ವರ್ಷದ ಪುರುಷನಲ್ಲೂ ಸೋಂಕು ಕಾಣಿಸಿಕೊಂಡಿದೆ.

    ಚಿತ್ರದುರ್ಗ ಜಿಲ್ಲೆ ಭರಮಸಾಗರದ 75 ವರ್ಷದ ವೃದ್ಧ, ದಾವಣಗೆರೆಯ ಹೊಂಡದ ಸರ್ಕಲ್‌ನ 35 ವರ್ಷದ ಮಹಿಳೆ ಮತ್ತು ಜಗಳೂರಿನ 43 ವರ್ಷದ ಪುರುಷನಲ್ಲಿ ಶೀತ, ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದು ಕರೊನಾ ಸೋಂಕು ತಗುಲಿದೆ.

    ದಾವಣಗೆರೆಯ ಬೇತೂರು ರಸ್ತೆಯ 9 ವರ್ಷದ ಬಾಲಕಿಗೆ ಪಾಸಿಟಿವ್ ಬಂದಿದೆ. ಇಲ್ಲಿನ ವಿನೋಬನಗರದ ಒಂದೇ ಕುಟುಂಬದ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ.

    ಜಿಲ್ಲೆಯಲ್ಲಿ ಕರೊನಾ ಪ್ರಕರಣಗಳ ಸಂಖ್ಯೆ 300ರ ಗಡಿ ದಾಟಿದೆ (309). ಮಂಗಳವಾರ ಸೋಂಕಿನಿಂದ ಚೇತರಿಸಿಕೊಂಡ 9 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು ಚೇತರಿಸಿಕೊಂಡವರ ಸಂಖ್ಯೆ 266ಕ್ಕೆ ಏರಿಕೆಯಾಗಿದೆ. ಪ್ರಸ್ತುತ 35 ಸಕ್ರಿಯ ಪ್ರಕರಣಗಳಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts