More

    ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಲು ಸಿಪಿಐ ಒತ್ತಾಯ

    ದಾವಣಗೆರೆ : ಮಣಿಪುರ ರಾಜ್ಯದಲ್ಲಿ ಗಲಭೆ ನಿಯಂತ್ರಿಸಿ ತಪ್ಪಿತಸ್ಥರನ್ನು ಉಗ್ರ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಘಟಕದಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
     ಜಯದೇವ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಉಪ ವಿಭಾಗಾಧಿಕಾರಿ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಪತ್ರ ರವಾನಿಸಿದರು.
     ಎರಡು ತಿಂಗಳಿಗಿಂತಲೂ ಹೆಚ್ಚು ಕಾಲದಿಂದ ಮಣಿಪುರ ರಾಜ್ಯದಲ್ಲಿ ಮೀಸಲಾತಿ ಆದೇಶ ಕುರಿತಂತೆ ಜನಾಂಗೀಯ ಗಲಭೆ ನಡೆಯುತ್ತಿದ್ದು ಈ ಹಿಂಸಾಚಾರ ನಿಯಂತ್ರಿಸುವಲ್ಲಿ ಪ್ರಧಾನ ಮಂತ್ರಿ ಮತ್ತು ಆ ರಾಜ್ಯದ ಮುಖ್ಯಮಂತ್ರಿ ವಿಫಲರಾಗಿದ್ದು ಕೂಡಲೇ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.
     ಗಲಭೆ ಸಂದರ್ಭದಲ್ಲಿ ಕೋಮುವಾದಿ ಕಿಡಿಗೇಡಿಗಳು ಮೂರು ಜನ ಮಹಿಳೆಯರನ್ನು ಬೆತ್ತಲೆಗೊಳಿಸಿ ಸಾರ್ವಜನಿಕವಾಗಿ ಅವರನ್ನು ಮೆರವಣಿಗೆ ಮಾಡಿ, ಒಬ್ಬ ಮಹಿಳೆಯನ್ನು ಜನರ ಎದುರೇ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾರೆ. ತಪ್ಪಿತಸ್ಥರನ್ನು ಉಗ್ರ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
     ಅಲ್ಲಿನ ಘಟನೆಗಳಿಂದ ಜನರು ಭಯಭೀತರಾಗಿದ್ದು ಮಣಿಪುರದಲ್ಲಿ ಶಾಂತಿ, ಸೌಹಾರ್ದತೆ ನೆಲೆಸಲೆಂದು ಹೋರಾಟಕ್ಕೆ ಮುಂದಾದ ನ್ಯಾಷನಲ್ ಫೆಡರೇಷನ್ ಆಫ್ ಇಂಡಿಯನ್ ವುಮೆನ್ ಸಂಘಟನೆಯ ಮಹಿಳಾ ಮುಖಂಡರ ಮೇಲೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಅನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿದರು.
     ಪಕ್ಷದ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು, ಸಹ ಕಾರ್ಯದರ್ಶಿ ಎಚ್.ಜಿ. ಉಮೇಶ್, ಆವರಗೆರೆ ವಾಸು, ಆನಂದರಾಜ್, ಐರಣಿ ಚಂದ್ರು, ರಂಗನಾಥ್, ಎಚ್.ಪಿ. ಉಮಾಪತಿ, ನೇತ್ರಾವತಿ, ಸುರೇಶ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts