ಚನ್ನಗಿರಿ ಘಟನೆಯ ಪಾರದರ್ಶಕ ತನಿಖೆಗೆ ಆಗ್ರಹ

blank

ದಾವಣಗೆರೆ : ಆದಿಲ್ ಸಾವು ಹಾಗೂ ಚನ್ನಗಿರಿ ಪೊಲೀಸ್ ಠಾಣೆ ಮುಂದೆ ನಡೆದ ಅಹಿತಕರ ಘಟನೆಗಳ ಕುರಿತಂತೆ ಪಾರದರ್ಶಕ ತನಿಖೆ ನಡೆಯಬೇಕು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಹಾಗೂ ಇನ್‌ಸೈಟ್ಸ್ ಐಎಎಸ್ ಸಂಸ್ಥೆಯ ಸಂಸ್ಥಾಪಕ ಜಿ.ಬಿ. ವಿನಯ್ ಕುಮಾರ್ ಆಗ್ರಹಿಸಿದರು.
 ಪೊಲೀಸರ ವಶದಲ್ಲಿದ್ದಾಗ ಮೃತಪಟ್ಟ ಆದಿಲ್ನ ಚನ್ನಗಿರಿ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು, ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
 ಚನ್ನಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ, ವಾಹನಗಳ ಜಖಂ, ಪೊಲೀಸ್ ಸಿಬ್ಬಂದಿಗೆ ಗಾಯ ಸೇರಿ ಗಲಾಟೆ ನಡೆದಿದ್ದು ದುರದೃಷ್ಟಕರ ಎಂದು ಹೇಳಿದರು.
 ಎಫ್‌ಐಆರ್ ದಾಖಲಿಸದೆ ಆದಿಲ್ ಅವರನ್ನು ಏಕೆ ವಶಕ್ಕೆ ಪಡೆಯಲಾಯಿತು ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡಿದೆ. ಏಕೆ ಗಲಭೆ ನಿಯಂತ್ರಣ ಮಾಡಲು ಆಗಲಿಲ್ಲ?, ಜೀಪ್ ಧ್ವಂಸ ಮಾಡಿದ್ದು, ಕಲ್ಲು ತೂರಾಟ ಮಾಡಿದ್ದು ಸರಿಯಲ್ಲ. ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದು ಸರಿಯಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
 ಇದುವರೆಗೆ 28 ಜನರನ್ನು ಬಂಧಿಸಲಾಗಿದೆ. ಗಲಾಟೆಯಲ್ಲಿ ತೊಡಗಿದ್ದ ಇನ್ನೂ 50ಕ್ಕೂ ಹೆಚ್ಚು ಜನರಿದ್ದು ಅವರನ್ನು ಸೆರೆ ಹಿಡಿಯಲಾಗುವುದು ಎಂಬ ಮಾಹಿತಿ ಪೊಲೀಸರಿಂದ ಸಿಕ್ಕಿದೆ ಎಂದು ವಿನಯ್ ಕುಮಾರ್ ಹೇಳಿದರು.
 ಅಮಾಯಕರನ್ನು ಯಾವುದೆ ಕಾರಣಕ್ಕೂ ಬಂಧಿಸಬಾರದು. ಎಷ್ಟೋ ಜನರು ಗಲಾಟೆ ಆಗುತ್ತಿರುವಾಗ ನೋಡಲು ಬಂದಿರುತ್ತಾರೆ. ಚನ್ನಗಿರಿ ಸಮೃದ್ಧಿಯ ತಾಣ. ಶಾಂತಿಯ ನೆಲವಾಗಿತ್ತು. ಈ ಘಟನೆ ನಡೆದಿದ್ದು ಸರಿಯಲ್ಲ ಎಂದರು.
 ಲಾಕಪ್ ಡೆತ್ ಆಗಿದೆಯೋ ಇಲ್ಲವೋ ಗೊತ್ತಿಲ್ಲ. ಈ ಬಗ್ಗೆ ತನಿಖೆಯಾದ ಬಳಿಕ ಸತ್ಯಾಂಶ ಹೊರಬರಲಿದೆ. ಸುಳ್ಳು ವದಂತಿ ಹರಡಿದಾಗ ಜನರು ಆವೇಗ, ಆವೇಶಕ್ಕೆ ಒಳಗಾಗುವುದು ಸಹಜ. ಕಾನೂನು ಕೈಗೆ ತೆಗೆದುಕೊಂಡಿದ್ದು ತಪ್ಪು. ಇದನ್ನು ಸಮರ್ಥಿಸಿಕೊಳ್ಳಲು ಆಗದು ಎಂದು ಅಭಿಪ್ರಾಯಪಟ್ಟರು.
 ಗಲಾಟೆ ಕುರಿತಂತೆ ಇಡೀ ಸಮುದಾಯವನ್ನೆ ಗುರಿಯಾಗಿಸುವುದು ಸರಿಯಲ್ಲ. ಪೊಲೀಸರ ಮೇಲೆ ಹೆಚ್ಚಿನ ಒತ್ತಡ ಇದ್ದಾಗ ಅಮಾಯಕರನ್ನು ಬಂಧಿಸುವ ಸಾಧ್ಯತೆ ಇರುತ್ತದೆ ಎಂದು ಹೇಳಿದರು.
 

Share This Article

Vastu Tips : ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ!ಸಾಲದ ಸುಳಿಗೆ ಸಿಲುಕುತ್ತೀರಿ..!

Vastu Tips: ದೃಷ್ಟ ಚೆನ್ನಾಗಿದ್ದರೆ ಕೆಲವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಕೆಲವರು  ಐಷಾರಾಮಿ ಜೀವನ ನಡೆಸಲು ಕಷ್ಟಪಡುತ್ತಾರೆ. ಅವರು…

Health Tips: ನೆಲದ ಮೇಲೆ ಕುಳಿತುಕೊಂಡು ತಿನ್ನಲು ಸಾಧ್ಯವಿಲ್ಲವೇ? ಆದ್ರೆ ಈ ಅದ್ಭುತ ಪ್ರಯೋಜನಗಳೇನು ಗೊತ್ತಾ?

Health Tips: ನಮ್ಮ ಹಿರಿಯರು ಊಟ ಮಾಡುವಾಗ ನೆಲದ ಮೇಲೆ ಕಾಲು ಮಡಚಿ ಕೂರುತ್ತಿದ್ದರು. ಆಧುನಿಕ ಕಾಲದಲ್ಲಿ…

Alcohol In Winter: ಚಳಿಯಲ್ಲಿ ಮದ್ಯ ಸೇವನೆ ಎಷ್ಟು ಅಪಾಯಕಾರಿ ಗೊತ್ತಾ?

Alcohol In Winter: ಚಳಿಗಾಲ ಆರಂಭವಾಗಿದೆ ಮತ್ತು ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದಲ್ಲದೆ, ಜ್ವರ…