ಶೈಕ್ಷಣಿಕ ಪ್ರಗತಿಗೆ ಸಾಂಸ್ಕೃತಿಕ ಚಟುವಟಿಕೆ ಸಹಕಾರಿ

ದಾವಣಗೆರೆ :  ಮಾನಸಿಕ ಆರೋಗ್ಯದ ಜತೆಗೆ ಶೈಕ್ಷಣಿಕ ಪ್ರಗತಿ ಸಾಧಿಸಲು ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.  ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ 2023-24ನೇ ಸಾಲಿನ ಪಠ್ಯಪೂರಕ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.  ಅಧ್ಯಯನ ಹಾಗೂ ಅಂಕ ಗಳಿಕೆಗೆ ಹೆಚ್ಚು ಒತ್ತು ನೀಡಿ ಬಹಳಷ್ಟು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ. ಹೀಗಾದರೆ ನಾಯಕತ್ವ ಹಾಗೂ ಕೌಶಲ ಬೆಳೆಸಿಕೊಳ್ಳಲು ಆಗುವುದಿಲ್ಲ ಎಂದು ತಿಳಿಸಿದರು.  ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಎಷ್ಟು ಜನ ಭಾಗವಹಿಸಿದ್ದಿರಿ? ಬಹುತೇಕರು ಯಾಕೆ ಭಾಗವಹಿಸಿಲ್ಲ ಎಂದು ಪ್ರಶ್ನಿಸುವ ಮೂಲಕ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದ ಅವರು, ಡಾ.ಬಿ.ಸಿ. ರಾಯ್ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದರೂ ಬಿಡುವು ಮಾಡಿಕೊಂಡು ವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದರು. ಅಂತಹ ಸೂಪರ್ ಅಚೀವರ್ ಆಗಲು ವಿದ್ಯಾರ್ಥಿಗಳಿಗೆ ಸಮಯ ನಿರ್ವಹಣೆ ಬಹಳ ಮುಖ್ಯ ಎಂದು ಕಿವಿಮಾತು ಹೇಳಿದರು.  ಪುಸ್ತಕಗಳು ಜೀವನದಲ್ಲಿ ಒಳ್ಳೆಯ ಸ್ನೇಹಿತರಾಗಿದ್ದು, ಅವುಗಳಲ್ಲಿರುವ ಉತ್ತಮ ಅಂಶಗಳು ಜೀವನ ಮೌಲ್ಯಗಳನ್ನು ತಂದುಕೊಡಲಿವೆ. ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ತತ್ವಶಾಸ್ತ್ರ, ಸಾಧಕರ ಜೀವನ ಚರಿತ್ರೆ ಮೊದಲಾದ ಪುಸ್ತಕಗಳನ್ನು ಅಧ್ಯಯನ ಮಾಡಬೇಕು ಎಂದರು.  ಒತ್ತಡದ ಜೀವನದಿಂದ ಎಲ್ಲರಲ್ಲಿ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಕಂಡು ಬರುತ್ತಿದೆ. ಜೀವನ ಶೈಲಿಯೇ ರೋಗಗಳಿಗೆ ಪ್ರಮುಖ ಕಾರಣವಾಗಿದೆ. ಹೀಗಾಗಿ, ನಿತ್ಯ ಯೋಗಾಸನ, ಪ್ರಾಣಾಯಾಮ, ನಡಿಗೆ ಮೊದಲಾದ ಚಟುವಟಿಕೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.  ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನರು ಜಂಕ್‌ಫುಡ್ ಸೇವಿಸುತ್ತಿದ್ದು, ಪೌಷ್ಟಿಕಾಂಶಗಳ ಕೊರತೆ ಎದುರಿಸುವಂತಾಗಿದೆ. ಇಂತಹ ಆಹಾರ ಪದಾರ್ಥ ಸೇವನೆಯನ್ನು ಕ್ರಮೇಣ ಕಡಿಮೆ ಮಾಡಿ, ಸೊಪ್ಪು, ತರಕಾರಿ, ಬೇಳೆಕಾಳು ಹಾಗೂ ಸಿರಿಧಾನ್ಯಯುಕ್ತ ಆಹಾರ ಸೇವನೆ ಮಾಡಬೇಕು ಎಂದು ಹೇಳಿದರು.  ಪ್ರಾಚಾರ್ಯ ಡಾ.ಎಂ. ಮಂಜಣ್ಣ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಡಾ. ಮಲ್ಲಿಕಾರ್ಜುನ ಕಲಮರಹಳ್ಳಿ, ವಿಶ್ರಾಂತ ಪ್ರಾಧ್ಯಾಪಕ ಡಾ. ತಿಪ್ಪಾರೆಡ್ಡಿ ಇದ್ದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.  ಐಕ್ಯೂಎಸಿ ಸಂಚಾಲಕ ಡಾ. ಭೀಮಪ್ಪ ಸ್ವಾಗತಿಸಿದರು. ಸಾಂಸ್ಕೃತಿಕ ಸಮಿತಿ ಸಂಚಾಲಕ ತೊಪ್ಪಲ ಕೆ. ಮಲ್ಲಿಕಾರ್ಜುನಗೌಡ ಪ್ರಾಸ್ತಾವಿಕ ಮಾತನಾಡಿದರು. ವಿದ್ಯಾರ್ಥಿನಿಯರಾದ ಸಿಂಧು ಮತ್ತು ಶ್ವೇತಾ ನಿರೂಪಿಸಿದರು.  ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ಅವರು ಕಾಲೇಜಿನ ಗ್ರಂಥಾಲಯಕ್ಕೆ 1 ಸಾವಿರ ಪುಸ್ತಕಗಳ ಕೊಡುಗೆ ನೀಡಿದರು.

Share This Article

ಪುರುಷರೇ ಎಡಗೈ, ಮಹಿಳೆಯರ ಬಲ ಅಂಗೈ ತುರಿಕೆಯಾದ್ರೆ ಕಾದಿದೆ ಈ ಗಂಡಾಂತರ!

ಬೆಂಗಳೂರು: ಅಂಗೈ ತುರಿಕೆಯಾಗಿದೆ ಎಂದರೆ ಹಣ ಬರುತ್ತದೆ ಎಂದು ಹಲವರು ಹೇಳುತ್ತಾರೆ. ಕೆಲವರು ಹಣ ಕಳೆದುಕೊಳ್ಳುತ್ತಿದ್ದಾರೆ…

ಈ ದಿನಾಂಕದಂದು ಜನಿಸಿದವರು ಜೀವನದಲ್ಲಿ ರಾಜರಂತೆ ಬದುಕುತ್ತಾರೆ… ನೀವೂ ಇದೇ ದಿನ ಹುಟ್ಟಿದ್ದೀರಾ ನೋಡಿ!

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಈ ಮೂರು ಕೆಲಸಗಳನ್ನು ಮಾಡಿದ ನಂತರ ಹಲ್ಲುಜ್ಜಬೇಡಿ! ಅನಾರೋಗ್ಯಕ್ಕೊಳಗಾಗುವುದು ಖಂಡಿತ..

ಬೆಂಗಳೂರು: ಬಾಯಿಯನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು ಆರೋಗ್ಯಕ್ಕೆ ಬಹಳ ಮುಖ್ಯ. ಸೂಕ್ಷ್ಮಜೀವಿಗಳು ಬಾಯಿಯ ಮೂಲಕ ಹೊಟ್ಟೆಯನ್ನು ಪ್ರವೇಶಿಸುತ್ತವೆ. ಇದು…