More

    ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು

    ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಗದಗ, ಹಾವೇರಿ ಜಿಲ್ಲಾ ವ್ಯಾಪ್ತಿಯ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕಾಗಿ ಭದ್ರಾ ನದಿಯ ಮೂಲಕ ಬುಧವಾರ ರಾತ್ರಿ 10 ಗಂಟೆಯಿಂದ ಮೇ 28ರ ವರೆಗೆ ನೀರು ಹರಿಸಲಾಗುವುದು ಎಂದು ಕರ್ನಾಟಕ ನೀರಾವರಿ ನಿಗಮದ ಭದ್ರಾ ಯೋಜನೆ ವೃತ್ತದ ಅಧೀಕ್ಷಕ ಇಂಜಿನಿಯರ್ ಹೇಳಿದ್ದಾರೆ.
     ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ದನಕರುಗಳನ್ನು ನದಿಗೆ ಇಳಿಸುವುದಾಗಲಿ, ಇತರೆ ಚಟುವಟಿಕೆಗಾಗಿ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಅವಧಿಯಲ್ಲಿ ರೈತರು ನದಿ ದಂಡೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಪಂಪ್‌ಸೆಟ್ಗಳಿಂದ ನೀರೆತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
     …
     ನಿರ್ಧಾರ ಕೈಬಿಡಲು ಆಗ್ರಹ
     ಭದ್ರಾ ಜಲಾಶಯದಿಂದ ಭದ್ರಾ ನದಿಗೆ ಪ್ರತಿ ದಿನ 2000 ಕ್ಯೂಸೆಕ್ ನೀರನ್ನು 6 ದಿನ ಹರಿಸಲು ಸರ್ಕಾರ ಮಾಡಿರುವ ತೀರ್ಮಾನವನ್ನು ಕೈಬಿಡಬೇಕು ಎಂದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಭಾರತೀಯ ರೈತ ಒಕ್ಕೂಟದ ಜಿಲ್ಲಾಧ್ಯಕ್ಷ ಎಚ್.ಆರ್. ಲಿಂಗರಾಜ್ ಶಾಮನೂರು ಆಗ್ರಹಿಸಿದ್ದಾರೆ.
     ಭದ್ರಾ ನದಿ ಪಾತ್ರದಲ್ಲಿ ಮಳೆಯಾಗಿ ಹರಿಹರದ ತುಂಗಭದ್ರಾ ನದಿಗೆ ಸುಮಾರು 6 ರಿಂದ 8 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿರುವುದರಿಂದ ಜಲಾಶಯದಿಂದ ಕುಡಿಯುವ ನೀರು ಒದಗಿಸುವ ಅಗತ್ಯವಿಲ್ಲ. ಆದ್ದರಿಂದ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.
     ಭದ್ರಾ ಜಲಾಶಯವು ದಾವಣಗೆರೆ ಜಿಲ್ಲೆಯ ಅಚ್ಚುಕಟ್ಟು ಭಾಗದ ರೈತರ ಜೀವನಾಡಿಯಾಗಿದೆ. ಭತ್ತ ಮತ್ತು ತೋಟಗಾರಿಕಾ ಬೆಳೆಗಾರರು ಆ ನೀರನ್ನೇ ಅವಲಂಬಿಸಿದ್ದಾರೆ. ಮುಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದಲ್ಲಿ ನೀರು ಸಂಗ್ರಹವಾಗಬೇಕಿದೆ. ಪ್ರಸ್ತುತ ಜಲಾಶಯದ ಸುತ್ತಮುತ್ತ ಮಳೆಯಾಗಿ ನೀರು ಹರಿದು ಬರುತ್ತಿದೆ. ಈ ಹಂತದಲ್ಲಿ ನದಿಗೆ ಬಿಟ್ಟರೆ ಮುಂದಿನ ದಿನಗಳಲ್ಲಿ ನೀರಿನ ಕೊರತೆ ಉಂಟಾಗಬಹುದು. ಈ ಎಲ್ಲ ಅಂಶಗಳ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದ್ದಾರೆ.
     …
     ಪರಿಹಾರ ನೀಡಲು ಒತ್ತಾಯ
     ರಾಜ್ಯದಲ್ಲಿ ಮುಂಗಾರುಪೂರ್ವ ಮಳೆಯ ಹಿನ್ನೆಲೆಯಲ್ಲಿ ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಗಳ ಕುಟುಂಬದವರಿಗೆ ಹಾಗೂ ಜಾನುವಾರುಗಳ ಮಾಲೀಕರಿಗೆ ರಾಜ್ಯ ಸರ್ಕಾರ ಪ್ರಕೃತಿ ವಿಕೋಪ ನಿಧಿಯಿಂದ ಕನಿಷ್ಠ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಎಚ್.ಆರ್. ಲಿಂಗರಾಜ್ ಶಾಮನೂರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
     ರಾಸುಗಳಿಗೆ ಬೆಲೆ ಕಟ್ಟಿ ಹಣ ಕೊಡಬೇಕು. ರಾಜ್ಯಮಟ್ಟದಲ್ಲಿ ಸಾಮೂಹಿಕ ವಿಮೆ ಮಾಡಿಸಬೇಕು. ಈ ಕುರಿತು ವಿಮಾ ಕಂಪನಿಗಳೊಂದಿಗೆ ಚರ್ಚಿಸಿ ಕಾರ್ಯರೂಪಕ್ಕೆ ತರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts