More

    402 ಕೋಟಿ ರೂ. ಕ್ರಿಯಾಯೋಜನೆ ಅನುಮೋದನೆ

    ದಾವಣಗೆರೆ : ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ 2023-24 ನೇ ಸಾಲಿನಲ್ಲಿ ಜಿಲ್ಲೆಗೆ 402 ಕೋಟಿ ರೂ. ಕ್ರಿಯಾ ಯೋಜನೆ ಅನುಮೋದನೆಯಾಗಿದ್ದು ಫೆಬ್ರವರಿ ಅಂತ್ಯಕ್ಕೆ ಶೇ. 90 ರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಸೂಚನೆ ನೀಡಿದರು.
     ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
     ಈ ಸಾಲಿನಲ್ಲಿ ಎಸ್‌ಸಿಪಿಯಡಿ ಕೇಂದ್ರ ವಲಯದ 82.29 ಕೋಟಿ ರೂ, ರಾಜ್ಯ ವಲಯದ 136.6 ಕೋಟಿ ರೂ. ಹಾಗೂ ಜಿಲ್ಲಾ ವಲಯದ 30.30 ಕೋಟಿ ರೂ. ಸೇರಿ 249.20 ಕೋಟಿ ರೂ.ಗೆ ಕ್ರಿಯಾ ಯೋಜನೆ ಅನುಮೋದಿಸಲಾಗಿದೆ. ಇದರಲ್ಲಿ ಇಲ್ಲಿಯವರೆಗೆ 134.28 ಕೋಟಿ ರೂ. ಬಿಡುಗಡೆಯಾಗಿ 99.17 ಕೋಟಿ ರೂ. ವೆಚ್ಚವಾಗಿ ಶೇ. 73.86 ರಷ್ಟು ಪ್ರಗತಿಯಾಗಿದೆ ಎಂದು ತಿಳಿಸಿದರು.
     ಟಿಎಸ್‌ಪಿ ಅಡಿ ಕೇಂದ್ರ ವಲಯ 62.46 ಕೋಟಿ ರೂ, ರಾಜ್ಯ ವಲಯ 70.49 ಕೋಟಿ ರೂ. ಹಾಗೂ ಜಿಲ್ಲಾ ವಲಯ 19.96 ಕೋಟಿ ರೂ. ಸೇರಿ 152.93 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಅನುಮೋದಿಸಲಾಗಿದೆ. ಇದರಲ್ಲಿ 83.46 ಕೋಟಿ ರೂ. ಬಿಡುಗಡೆಯಾಗಿದ್ದು 66.09 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದರು.
     ಶೇ. 75 ಕ್ಕಿಂತ ಕಡಿಮೆ ಪ್ರಗತಿ ಸಾಧಿಸಿರುವ ಇಲಾಖೆಯವರು ಮಾರ್ಚ್ ಅಂತ್ಯದ ವರೆಗೆ ಕಾಯದೆ ಫೆಬ್ರವರಿಯಲ್ಲಿ ಪ್ರಗತಿ ಸಾಧಿಸಬೇಕು. ಕಾಮಗಾರಿಗಳನ್ನು ಕೈಗೊಳ್ಳುವಾಗ ಜನರಿಗೆ ಅನುಕೂಲವಾಗುವ ಜತೆಗೆ ಬಹಳ ದಿನಗಳ ವರೆಗೆ ಬಾಳಿಕೆ ಬರಬೇಕು. ಈ ನಿಟ್ಟಿನಲ್ಲಿ ಯೋಜನೆಗಳನ್ನು ಅನುಷ್ಠಾನ ಮಾಡಬೇಕು ಎಂದು ಹೇಳಿದರು.
     ಜಲ ಸಂಪನ್ಮೂಲ ಇಲಾಖೆಯಿಂದ ಎಸ್‌ಸಿಪಿ ಅಡಿ 34 ಕೋಟಿ ರೂ, ಟಿಎಸ್‌ಪಿ ಅಡಿ 17 ಕೋಟಿ ರೂ. ಇದ್ದು ಶೂನ್ಯ ಸಾಧನೆ ಮಾಡಲಾಗಿದೆ. ಸಿಸಿ ರಸ್ತೆ, ಸಮುದಾಯ ಭವನ, ಚೆಕ್ ಡ್ಯಾಮ್ ಕಾಮಗಾರಿ ತೆಗೆದುಕೊಳ್ಳಲಾಗಿದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
     ಈ ವೇಳೆ ಜಲಸಂಪನ್ಮೂಲ ಇಲಾಖೆಯಿಂದ ನೀರಾವರಿ ಅಚ್ಚುಕಟ್ಟು ಪ್ರದೇಶದ ಕೊನೇ ಭಾಗದ ರೈತರಿಗೆ ಅನುಕೂಲವಾಗುವಂತೆ ಯೋಜನೆ ರೂಪಿಸಲು ಜಿಲ್ಲಾಧಿಕಾರಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts