ಕೊಡಗನೂರು ಕೆರೆ ಏರಿ ಭದ್ರತೆ ಪರಿಶೀಲಿಸಿದ ಡಿಸಿ

ದಾವಣಗೆರೆ : ತಾಲೂಕಿನ ಕೊಡಗನೂರು ಕೆರೆ ಏರಿಯ ಭದ್ರತೆಯನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಬುಧವಾರ ಪರಿಶೀಲಿಸಿದರು.
 ಕೊಡಗನೂರು ಕೆರೆ ಏರಿಯು ಕಳೆದ ವರ್ಷದ ಭಾರಿ ಮಳೆಗೆ ಕುಸಿದು ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ಏರಿಗೆ ಲಕ್ಷ ಮರಳಿನ ಚೀಲಗಳನ್ನು ಹಾಕುವ ಮೂಲಕ ಏರಿ ಭದ್ರತೆ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.
 ಈ ವರ್ಷ ಮುಂಗಾರು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಇಂಜಿನಿಯರ್‌ಗಳ ತಂಡದೊಂದಿಗೆ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆರೆಯ ಎರಡೂ ಕಡೆಯ ಕೋಡಿಯನ್ನು ವೀಕ್ಷಿಸಿ, ಈ ಹಿಂದೆ ಬಸಿ ಹೋಗುತ್ತಿದ್ದು ದುರಸ್ತಿ ನಂತರ ಬಸಿ ನಿಂತಿರುವುದನ್ನು ಪರಿಶೀಲಿಸಿದರು.
 ಕೆರೆ ಏರಿಯನ್ನು ಮರಳು ಮತ್ತು ಮಣ್ಣು ಹಾಕುವ ಮೂಲಕ ಭದ್ರತೆ ಮಾಡಿದ್ದು ಹೊಸದಾಗಿ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದೇ ಮಾರ್ಗದ ಮೂಲಕ ಚಿಕ್ಕಜಾಜೂರು, ಹೊಳಲ್ಕೆರೆ, ಹೊಸದುರ್ಗಕ್ಕೆ ಹೋಗಬೇಕಾಗಿದ್ದು ಲೋಕೋಪಯೋಗಿ ಇಲಾಖೆಯಿಂದ ರಸ್ತೆಯನ್ನು ನಿರ್ಮಿಸುವಂತೆ ಸ್ಥಳದಲ್ಲಿದ್ದ ಇಂಜಿನಿಯರ್‌ಗೆ ಸೂಚನೆ ನೀಡಿದರು.
 ಈ ವೇಳೆ ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರವೀಣ್, ಸಹಾಯಕ ಇಂಜಿನಿಯರ್ ರುದ್ರಮುನಿ, ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಸ್ವಾಮಿ ಇದ್ದರು.

Share This Article

ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips

ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…