More

    ಡೆಂಘೆ, ಚಿಕುನ್‌ಗುನ್ಯಾ ನಿಯಂತ್ರಣಕ್ಕೆ ಬೇಕು ಮುಂಜಾಗ್ರತೆ

    ದಾವಣಗೆರೆ : ಜಿಲ್ಲೆಯಲ್ಲಿ ಡೆಂಘೆ ಮತ್ತು ಚಿಕುನ್‌ಗುನ್ಯಾ ರೋಗಗಳ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.
     ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಡೆಂಘೆ ದಿನಾಚರಣೆಯಲ್ಲಿ ಮಾತನಾಡಿ, ಡೆಂೆ ನಿಯಂತ್ರಣಕ್ಕಾಗಿ ಹಾಗೂ ಮುಂಜಾಗ್ರತಾ ಕ್ರಮಗಳ ಅನುಷ್ಠಾನದಲ್ಲಿ ಸಮುದಾಯದ ಪಾತ್ರ ಮುಖ್ಯವಾಗಿರುತ್ತದೆ ಎಂದು ಹೇಳಿದರು.
     ಈ ವರ್ಷದ ಧ್ಯೇಯ ವಾಕ್ಯದಂತೆ ಸಾರ್ವಜನಿಕರೊಂದಿಗೆ ನಿಕಟ ಸಂಪರ್ಕವಿರುವ ಸರ್ಕಾರದ ಇತರ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು, ಸರ್ಕಾರೇತರ ಸಂಘ ಸಂಸ್ಥೆಗಳು, ಸ್ವಯಂ ಸೇವಾ ಸಂಘಗಳು, ಸ್ಥಳೀಯ ಪ್ರಮುಖ ವ್ಯಕ್ತಿಗಳು, ಧಾರ್ಮಿಕ ಮುಖಂಡರ ಸಹಭಾಗಿತ್ವದಲ್ಲಿ ಮಳೆಗಾಲ ಹಾಗೂ ನಂತರದ ದಿನಗಳಲ್ಲಿ ಡೆಂೆ ನಿಯಂತ್ರಣ ಕ್ರಮಗಳನ್ನು ಸಮುದಾಯದ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.
     ಜಿಲ್ಲೆಯಲ್ಲಿ ವರದಿಯಾಗುವ ಎಲ್ಲ ಜ್ವರ ಪ್ರಕರಣಗಳಿಗೆ ರಕ್ತಲೇಪನ ಸಂಗ್ರಹಿಸುವುದು. ಶಂಕಿತ ಡೆಂಘೆ, ಚಿಕುನ್‌ಗುನ್ಯಾ ಪ್ರಕರಣಗಳಿಗೆ ರಕ್ತಮಾದರಿ ಸಂಗ್ರಹಿಸಿ ಪ್ರಯೋಗಾಲಯಗಳಿಗೆ ತಲುಪಿಸಬೇಕು ಎಂದು ತಿಳಿಸಿದರು.
     ಲಾರ್ವಾ ಸಮೀಕ್ಷೆ ಕಾರ್ಯವನ್ನು ವೈದ್ಯಾಧಿಕಾರಿಗಳು ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ಮೇಲ್ವಿಚಾರಣೆ ನಡೆಸಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ, ಈ ರೋಗಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
     ಸಾಂಕ್ರಾಮಿಕ ರೋಗಗಳ ಬಗ್ಗೆ ಕಾಲ ಕಾಲಕ್ಕೆ ನೀಡುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
     ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಮೊದಲು ಸೂಕ್ತವಾದ ಪ್ರಮಾಣದಲ್ಲಿ ಕ್ಲೋರಿನೇಶನ್ ಮಾಡಬೇಕು. ಗುಂಡಿಗಳನ್ನು ಮುಚ್ಚಿಸುವುದರ ಮೂಲಕ ನೀರು ಸಂಗ್ರಹವಾಗದಂತೆ ತಡೆಗಟ್ಟಬೇಕು ಎಂದರು.
     ಸೊಳ್ಳೆ ಉತ್ಪತ್ತಿ ತಾಣಗಳ ನಿವಾರಣೆ ಹಾಗೂ ಗ್ರಾಮ ನೈರ್ಮಲ್ಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಸಾರ್ವಜನಿಕ ನಲ್ಲಿಗಳು ಹಾಗೂ ಕೊಳವೆ ಬಾವಿಗಳಿಂದ ನೀರು ಸೋರಿಕೆಯಾಗದಂತೆ ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
     ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಹೆಚ್ಚುವರಿ ಎಸ್ಪಿ ರಾಮಗೊಂಡ ಬಸರಗಿ, ಉಪ ವಿಭಾಗಾಧಿಕಾರಿ ದುರ್ಗಾಶ್ರೀ, ಡಿಎಚ್‌ಒ ಡಾ.ನಾಗರಾಜ್, ಆರ್‌ಸಿಎಚ್ ಅಧಿಕಾರಿ ಡಾ.ಮೀನಾಕ್ಷಿ, ಪಾಲಿಕೆ ಆಯುಕ್ತೆ ರೇಣುಕಾ ಇದ್ದರು.
     ಇದೇ ವೇಳೆ ಡೆಂಘೆ ನಿಯಂತ್ರಣ ಕುರಿತ ಜಾಗೃತಿ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts