More

    ಕೋವಿಡ್ ಮರಣ ಪ್ರಮಾಣ ತಗ್ಗಿಸಿ

    ದಾವಣಗೆರೆ: ಜಿಲ್ಲ್ಲೆಯಲ್ಲಿ ಕರೊನಾ ನಿಯಂತ್ರಣ ಉತ್ತಮ ಸ್ಥಿತಿಯಲ್ಲಿದ್ದು ಸಾವಿನ ಪ್ರಮಾಣ ತಗ್ಗಿಸಲು ಅಧಿಕಾರಿಗಳು ಮತ್ತಷ್ಟು ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

    ಮುಖ್ಯಮಂತ್ರಿಗಳ ವಿಡಿಯೋ ಸಂವಾದದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕಂಟೇನ್ಮೆಂಟ್ ಹಾಗೂ ಬಫರ್ ವಲಯ ಸೇರಿದಂತೆ ಉಳಿದೆಡೆ ಹೆಚ್ಚಿನ ಗಂಟಲದ್ರವ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸುವ ಮೂಲಕ ಪಾಸಿಟಿವ್ ಇರುವವರನ್ನು ಬೇಗ ಪತ್ತೆ ಹಚ್ಚಿ, ಚಿಕಿತ್ಸೆ ನೀಡಬೇಕು ಎಂದರು.

    ವಾರ್ಡ್‌ವಾರು ರಚಿಸಲಾದ ಕಾರ್ಯ ಪಡೆಗಳ ಸದಸ್ಯರಿಗೆ ತರಬೇತಿ ನೀಡಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ದಾವಣಗೆರೆ, ಹರಿಹರದಲ್ಲಿ ಹೆಚ್ಚಿನ ಪರೀಕ್ಷೆಗಳು ಆಗಬೇಕಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಪಾಸಿಟಿವ್ ವರದಿ ಕಂಡುಬಂದಲ್ಲಿ ಆಯಾ ಆಸ್ಪತ್ರೆಗಳೇ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಬೇಕು. ನಂತರದಲ್ಲಿ ಅದರ ವೆಚ್ಚ ಭರಿಸಲಾಗುವುದು.

    ಹೆಚ್ಚು ಪ್ರಕರಣಗಳು ಕಂಡು ಬಂದಲ್ಲಿ ಸಿದ್ಧವಿರಬೇಕು. ಕೆಲವೆಡೆ ಚಿಕಿತ್ಸೆ ನೀಡುತ್ತಿರುವ ನೋಂದಣಿ ಇಲ್ಲದ ವೈದ್ಯರು ಹಾಗೂ ಕರೊನಾ ಪಾಸಿಟಿವ್ ಪ್ರಕರಣಗಳ ಮಾಹಿತಿ ನೀಡದವರ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

    ಜಿಪಂ ಸಿಇಒ ಪದ್ಮಾ ಬಸವಂತಪ್ಪ ಮಾತನಾಡಿ, ಹೊರ ಜಿಲ್ಲೆಗಳಿಂದ ಬಂದಿರುವ 1400 ಜನರ ಪಟ್ಟಿ ಮಾಡಲಾಗಿದ್ದು, ನಿಗಾ ಇರಿಸಲಾಗಿದೆ. ಹೊರ ಜಿಲ್ಲೆಗಳಿಂದ ಬಂದವರನ್ನು ಊರೊಳಗೆ ಸೇರಿಸಿಕೊಳ್ಳುತ್ತಿಲ್ಲವೆಂಬ ದೂರುಗಳನ್ನು ಪರಿಹರಿಸಲಾಗಿದೆ ಎಂದರು.

    ಎಸ್ಪಿ ಹನುಮಂತರಾಯ ಮಾತನಾಡಿ, ಸೋಂಕು ಕಂಡು ಬಂದಾಗ ಮಾರ್ಗಸೂಚಿ ಪಾಲಿಸಬೇಕು. ಮೂರು ಗಂಟೆಯೊಳಗಾಗಿ ನಿಗದಿತ ಪ್ರದೇಶವನ್ನು ಸೀಲ್‌ಡೌನ್ ಮಾಡಬೇಕೆಂದರು.

    ಎಸಿ ಮಮತಾ ಹೊಸಗೌಡರ್, ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಡಿಎಚ್‌ಒ ಡಾ.ಎಚ್.ಎಸ್.ರಾಘವೇಂದ್ರ ಸ್ವಾಮಿ, ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ.ರಾಘವನ್, ಡಾ.ನಟರಾಜ್, ಡಾ.ಕಾಳಪ್ಪ ಸಭೆಯಲ್ಲಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts