More

    ದಾವಣಗೆರೆ ಬೆಣ್ಣೆದೋಸೆ ಹಬ್ಬ

    ದಾವಣಗೆರೆ : ಪ್ರಸಿದ್ಧ ದಾವಣಗೆರೆ ಬೆಣ್ಣೆದೋಸೆಗೆ ಬ್ರ್ಯಾಂಡಿಂಗ್ ನೀಡಲು ಜಿಲ್ಲಾಡಳಿತದಿಂದ ಡಿ.23, 24 ಹಾಗೂ 25ರಂದು ದಾವಣಗೆರೆಯಲ್ಲಿ ಬೆಣ್ಣೆದೋಸೆ ಹಬ್ಬ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
     ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ದೋಸೆ ಉತ್ಸವ ಆಯೋಜನೆಗೆ ಸಂಬಂಧಿಸಿದಂತೆ ಸಿದ್ಧತೆಯ ಕುರಿತು ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
      ನಗರದ ಎಂ.ಬಿ.ಎ. ಕಾಲೇಜು ಮೈದಾನ ಮತ್ತು ಗ್ಲಾಸ್‌ಹೌಸ್ ಮುಂಭಾಗ ಬೆಣ್ಣೆದೋಸೆ ಹಬ್ಬ ಆಯೋಜಿಸಲಾಗಿದ್ದು, ಮೂರು ದಿನಗಳ ಕಾಲ ಬೆಳಗ್ಗೆ 8 ಗಂಟೆಯಿಂದ ರಾತ್ರಿಯವರೆಗೆ ದೋಸೆ ಸವಿಯಬಹುದಾಗಿದೆ. ಹಬ್ಬದಲ್ಲಿ ಸುಮಾರು 5 ಲಕ್ಷ ಜನರು ಭಾಗಿಯಾಗಬೇಕೆಂಬ ಗುರಿ ಹೊಂದಲಾಗಿದೆ ಎಂದು ಹೇಳಿದರು.
     ಈಗಾಗಲೇ ದೋಸೆ ಹೋಟೆಲ್ ಮಾಲೀಕರೊಂದಿಗೆ ಸಭೆ ನಡೆಸಲಾಗಿದ್ದು, 10 ಕ್ಕಿಂತ ಹೆಚ್ಚು ಹೋಟೆಲ್ ಮಾಲೀಕರು ಭಾಗವಹಿಸುವರು. ದಾವಣಗೆರೆ ದೋಸೆಯ ಸಾಂಪ್ರದಾಯಿಕತೆ ಉಳಿಸುವ ಮೂಲಕ ಗುಣಮಟ್ಟ ಕಾಪಾಡಿಕೊಂಡು ದಾವಣಗೆರೆ ಬೆಣ್ಣೆದೋಸೆಗೆ ಬ್ರಾೃಂಡಿಂಗ್ ಕಲ್ಪಿಸುವುದು ಈ ಹಬ್ಬದ ಉದ್ದೇಶವಾಗಿದೆ ಎಂದರು.
     ದೋಸೆ ಹೋಟೆಲ್ಗಳಿಗೆ ಮಾನದಂಡದನ್ವಯ ಮುಂದಿನ ದಿನಗಳಲ್ಲಿ ಅಧಿಕೃತ ಟ್ಯಾಗ್ ನೀಡಲಿದ್ದು, ಇದಕ್ಕಾಗಿ ಆಹಾರ ಸುರಕ್ಷತಾ ಕಾಯಿದೆ ನಿಯಮ ಪಾಲನೆ, ಗುಣಮಟ್ಟ, ಕಲಬೆರಕೆ ರಹಿತ ಆಹಾರದ ಮಾನದಂಡ ಅಳವಡಿಸಿಕೊಳ್ಳುವವರಿಗೆ ಈ ಟ್ಯಾಗ್ ನೀಡಲಾಗುತ್ತದೆ ಎಂದು ತಿಳಿಸಿದರು.
     ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಶ್ರೀ, ಪಾಲಿಕೆ ಆಯುಕ್ತೆ ರೇಣುಕಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts