ದಾವಣಗೆರೆ : ತಾಲೂಕಿನ ಗುಡಾಳು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಡಿ.ಟಿ. ಪುಷ್ಪಾ ಅವಿರೋಧ ಆಯ್ಕೆಯಾಗಿದ್ದಾರೆ. ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನದ ಆಯ್ಕೆಗೆ ಸೋಮವಾರ ಸಭೆ ನಡೆಯಿತು. ದಾವಣಗೆರೆ ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್. ಶೇರ್ ಅಲಿ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ. ರಾಘವೇಂದ್ರ ನಾಯ್ಕ, ಕಾರ್ಯದರ್ಶಿ ಯು. ಗಂಗಪ್ಪ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.
