More

    ಚುನಾವಣಾ ಕರ್ತವ್ಯಕ್ಕೆ ಕ್ಷೇತ್ರ ಆಯ್ಕೆ ಪ್ರಕ್ರಿಯೆ

    ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಚುನಾವಣೆ ನಡೆಯಲಿದ್ದು ಮತದಾನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನೇಮಕಕ್ಕೆ ಮೊದಲ ರ‌್ಯಾಂಡಮೈಸೇಶನ್ ಅನ್ನು ಮಂಗಳವಾರ ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಕೈಗೊಂಡರು.
     ಜಗಳೂರು, ದಾವಣಗೆರೆ ಉತ್ತರ, ದಕ್ಷಿಣ, ಮಾಯಕೊಂಡ, ಹರಿಹರ, ಚನ್ನಗಿರಿ, ಹೊನ್ನಾಳಿ ವಿಧಾನಸಭಾ ಕ್ಷೇತ್ರ ಹಾಗೂ ಹರಪನಹಳ್ಳಿ ತಾಲೂಕು ಅರಸೀಕೆರೆ ಹೋಬಳಿ ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಲಿದ್ದು 1946 ಮತಗಟ್ಟೆಗಳು ಕ್ಷೇತ್ರದಲ್ಲಿವೆ.
     ಪ್ರತಿ ಮತಗಟ್ಟೆಗೆ ಪಿಆರ್‌ಒ, ಎಪಿಆರ್‌ಒ, ಪಿಒ ಮತ್ತು ಒಬ್ಬರು ಗ್ರೂಪ್ ಡಿ ಸಿಬ್ಬಂದಿ ಇರಲಿದ್ದು ಮತಗಟ್ಟೆಗೆ ಬೇಕಾದ ಸಿಬ್ಬಂದಿಗಿಂತಲೂ ಹೆಚ್ಚುವರಿಯಾಗಿ ಶೇ. 30 ರಷ್ಟು ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ. ಚುನಾವಣೆಗಾಗಿ ಒಟ್ಟು 9700 ಸಿಬ್ಬಂದಿಯ ಸೇವೆಯನ್ನು ಪಡೆಯಲಾಗುತ್ತಿದೆ.
     ಮತದಾನಕ್ಕೆ ಅಗತ್ಯವಿರುವ ಸಿಬ್ಬಂದಿಯನ್ನು ಎಚ್.ಆರ್.ಎಂ.ಎಸ್. ಹಾಗೂ ನಾನ್ ಎಚ್.ಆರ್.ಎಂ.ಸಿ. ದತ್ತಾಂಶ ಆಧರಿಸಿ ಡೈಸ್ ಸಾಫ್ಟ್ೃವೇರ್ ಮೂಲಕ ಕರ್ತವ್ಯ ನಿರತ ಸ್ಥಳದಿಂದ ಬೇರೆ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನೇಮಕ ಮಾಡಲಾಗುತ್ತದೆ. 9700 ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನೇಮಕ ಮಾಡಿದ್ದು ಅವರು ಕರ್ತವ್ಯ ನಿರ್ವಹಿಸುವ ವಿಧಾನಸಭಾ ಕ್ಷೇತ್ರದ ಆಯ್ಕೆಯೆ ಮೊದಲ ರ‌್ಯಾಂಡಮೈಜೇಷನ್ ಆಗಿದೆ.
     ಈ ಪ್ರಕ್ರಿಯೆಯಿಂದ ಯಾರು ಯಾವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುವರೆಂದು ಗೊತ್ತುಪಡಿಸಿ ಅವರಿಗೆ ತರಬೇತಿ ದಿನಾಂಕವನ್ನು ನಿಗದಿ ಮಾಡಲು ಸಂಬಂಧಿಸಿದ ಸಿಬ್ಬಂದಿಗೆ ನೇಮಕಾತಿ ಆದೇಶ ಕಳುಹಿಸುವ ಪ್ರಕ್ರಿಯೆ ಇದಾಗಿದೆ.
     ಅಪರ ಜಿಲ್ಲಾಧಿಕಾರಿ ಸೈಯ್ಯದಾ ಅಫ್ರೀನ್ ಬಾನು ಎಸ್.ಬಳ್ಳಾರಿ, ಹೆಚ್ಚುವರಿ ಎಸ್ಪಿ ವಿಜಯಕುಮಾರ್ ಎಂ. ಸಂತೋಷ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್, ಎನ್.ಐ.ಸಿ ಅಧಿಕಾರಿ ಉದಯ ಕುಮಾರ್, ರಮೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts