ದಾವಣಗೆರೆ : ಬೆಂಗಳೂರಿನ ರ‌್ಯಾಡಿಸನ್ ಬ್ಲೂೃ ಹೋಟೆಲ್ ಸಭಾಂಗಣದಲ್ಲಿ ಸೆ.22ರಂದು ‘ಕರ್ನಾಟಕ ಮುಂದೇನು?’ ಚಿಂತನಾ ಸಭೆ ಆಯೋಜಿಸಲಾಗಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ರಾಜ್ಯದ ಜನತೆಗೆ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪರ್ಯಾವಾಗಿ ಹೊಸತನ ಹುಡುಕಲು ಮತ್ತು ಆಲೋಚಿಸಲು ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಭಾನುವಾರ ಬೆಳಗ್ಗೆ 10.30ರಿಂದ ಸಂಜೆ 5 ಗಂಟೆವರೆಗೆ ನಡೆಯುವ ಸಭೆಯಲ್ಲಿ ನಾಡಿನ ಸಾಹಿತಿಗಳು, ಚಿಂತಕರು, ಬರಹಗಾರರು, ಸಿನಿಮಾ ಕ್ಷೇತ್ರದವರು, ದಲಿತ, ರೈತ, ಕಾರ್ಮಿಕ ಹಾಗೂ ಮಹಿಳಾ ಸಂಘಟನೆಗಳ ಮುಖಂಡರು ಭಾಗವಹಿಸಿ ಗಂಭೀರ ಚರ್ಚೆ ನಡೆಸಲಿದ್ದಾರೆ ಎಂದರು. ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು, ಹಿಂದಿನ ಸರ್ಕಾರದ ಭ್ರಷ್ಟಾಚಾರ ಬಯಲಿಗೆಳೆದು ಜೈಲಿಗೆ ಕಳುಹಿಸಲಾಗುವುದು ಎಂದು ಸಿಎಂ ಹೇಳುತ್ತಾರೆ. ಇಂತಹ ಸಂದರ್ಭದಲ್ಲಿ ಜನಸಾಮಾನ್ಯರು ಹೊಸತನದ ಬಗ್ಗೆ ಚರ್ಚೆ ನಡೆಸದಿದ್ದರೆ ಎರಡೂ ಪಕ್ಷಗಳೇ ಪರ್ಯಾಯ ಎನ್ನುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದರು. ಸರ್ಕಾರ ರಾಜ್ಯದಲ್ಲಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದುಗೊಳಿಸದ ಕಾರಣ ಪ್ರತಿದಿನ ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಸಣ್ಣ ರೈತರು ಕೃಷಿ ಭೂಮಿ ಕಳೆದುಕೊಳ್ಳುತ್ತಿದ್ದು, ತಕ್ಷಣವೇ ಕಾಯ್ದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ರೈತ ಸಂಘದ ಪದಾಧಿಕಾರಿಗಳಾದ ಭೈರೇಗೌಡ ಪತ್ರೆಹಳ್ಳಿ, ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ಶತಕೋಟಿ ಬಸಣ್ಣ, ಚಿನ್ನಸಮುದ್ರ ಶೇಖರ್‌ನಾಯ್ಕ, ಮಲ್ಲನಗೌಡ ಪಾಟೀಲ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಕರ್ನಾಟಕ ಮುಂದೇನು?’ ಚಿಂತನಾ ಸಭೆ 22ಕ್ಕೆ
Bathing : ನೀರಿನಲ್ಲಿ ಇವುಗಳನ್ನು ಬೆರೆಸಿ ಸ್ನಾನ ಮಾಡಿದ್ರೆ ಸಾಕು ಅದೃಷ್ಟ ಖುಲಾಯಿಸುತ್ತದೆ…
ಬೆಂಗಳೂರು: ಪ್ರತಿದಿನ ಸ್ನಾನ ( Bathing ) ಮಾಡುವ ಅಭ್ಯಾಸವನ್ನು ಸಾಮಾನ್ಯವಾಗಿ ಎಲ್ಲರೂ ರೂಢಿಸಿಕೊಂಡಿರುತ್ತಾರೆ. ನೀವು…
ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…
ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach ) ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…
Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..
ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan) ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…