More

    ಫಸಲ್ ಬಿಮಾ ಯೋಜನೆ ನೋಂದಣಿಗೆ 31 ಕಡೆಯ ದಿನ

    ದಾವಣಗೆರೆ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಣಿ ಮಾಡಿಸಲು ಜುಲೈ 31 ಕೊನೆಯ ದಿನವಾಗಿದೆ. ಗ್ರಾಮ ಪಂಚಾಯಿತಿ ಮತ್ತು ಹೋಬಳಿವಾರು ಬೇರೆ ಬೇರೆ ಬೆಳೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.

    ಗ್ರಾಮ ಪಂಚಾಯಿತಿ ಹಂತದಲ್ಲಿ ದಾವಣಗೆರೆ, ಹೊನ್ನಾಳಿ, ನ್ಯಾಮತಿ, ಜಗಳೂರು, ಚನ್ನಗಿರಿ ತಾಲೂಕುಗಳಿಗೆ ಮೆಕ್ಕೆಜೋಳ (ಮಳೆಯಾಶ್ರಿತ), ಹರಿಹರ ತಾಲೂಕಿಗೆ ಮೆಕ್ಕೆಜೋಳ (ಮಳೆಯಾಶ್ರಿತ) ಭತ್ತ (ನೀರಾವರಿ) ಬೆಳೆಗಳ ಅಧಿಸೂಚನೆ ಇದೆ.

    ರೈತರು ತಮ್ಮ ವ್ಯಾಪ್ತಿಯ ಬ್ಯಾಂಕ್, ಸಹಕಾರ ಸಂಘಗಳಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ, ಪಾಸ್ ಪುಸ್ತಕ, ಕಂದಾಯ ರಸೀದಿ ಹಾಗೂ ಆಧಾರ ಸಂಖ್ಯೆ ಮಾಹಿತಿ ನೀಡಿ, ವಿಮಾ ಕಂತನ್ನು ಪಾವತಿಸಿ ನೋಂದಾಯಿಸಬಹುದು.

    ವಿವರಗಳಿಗೆ ಸ್ಥಳೀಯ ವಾಣಿಜ್ಯ, ಗ್ರಾಮೀಣ, ಸಹಕಾರಿ ಬ್ಯಾಂಕ್‌ಗಳನ್ನು, ರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿಗಳು ಇಲ್ಲವೇ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts