More

    ಮನೆಗೆಲಸದ ಮಹಿಳೆಯರಿಗೆ ನೆರವು ನೀಡಲು ಮನವಿ

    ದಾವಣಗೆರೆ: ಮನೆಗೆಲಸದ ಮಹಿಳೆಯರಿಗೆ ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸುವುದು ಸೇರಿದಂತೆ ಸರ್ಕಾರದಿಂದ ನೆರವು ನೀಡಬೇಕೆಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಒತ್ತಾಯಿಸಿದೆ.

    ಈ ಕುರಿತು ಮನೆಗೆಲಸದವರು ಸಂಘಟನೆಯ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
    ಲಾಕ್‌ಡೌನ್‌ನಿಂದಾಗಿ ಮನೆಗೆಲಸದವರೂ ಜೀವನೋಪಾಯ ಕಳೆದುಕೊಂಡಿದ್ದಾರೆ. 2-3 ತಿಂಗಳಿಂದ ಅವರು ಕೆಲಸಕ್ಕೆ ಹೋಗಲು ಸಾಧ್ಯವಾಗದೆ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದಾರೆ.

    ಕರೊನಾ ಸೋಂಕಿತರ ಸಂಖ್ಯೆಯು ಹೆಚ್ಚಾಗುತ್ತಿರುವಾಗ ಇವರು ಈ ಹಿಂದೆ ಕೆಲಸ ಮಾಡುತ್ತಿದ್ದ ಎಷ್ಟೋ ಮನೆಗಳಲ್ಲಿ ಕೆಲಸಕ್ಕೆ ಬಾರದಂತೆ ತಿಳಿಸಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಅವರಿಗೆ ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸಬೇಕು.
    ಸರ್ಕಾರ ತನ್ನ ಬಜೆಟ್‌ನಲ್ಲಿ ಅಸಂಘಟಿತ ಕಾರ್ಮಿಕರ ಕಲ್ಯಾಣ ಮಂಡಳಿಗೆ ಹಣ ಒದಗಿಸಿ ಮನೆಗೆಲಸದವರಿಗೂ ಪರಿಹಾರ ನೀಡಬೇಕು. ಅವರು ಮನೆ ಕೆಲಸಕ್ಕಾಗಿ ಬೇರೆ ಬೇರೆ ಪ್ರದೇಶ, ಬಡಾವಣೆಗಳಿಗೆ ಹೋಗುವುದರಿಂದ ಅವರಿಗೆ ಬಸ್‌ಪಾಸ್ ಅನ್ನು ರಿಯಾಯಿತಿ ದರದಲ್ಲಿ ನೀಡಬೇಕೆಂದು ಮನವಿ ಮಾಡಿದರು.

    ಸಂಘಟನೆಯ ಜಿಲ್ಲಾಧ್ಯಕ್ಷೆ ಜ್ಯೋತಿ ಕುಕ್ಕವಾಡ, ಜಿಲ್ಲಾ ಕಾರ್ಯದರ್ಶಿ ಕೆ.ಭಾರತಿ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ಮಮತಾ, ಪ್ರೇಮಾ, ಚಂದ್ರಮ್ಮ, ಗಂಗಮ್ಮ, ನಾಗಮ್ಮ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts