ದಾವಣಗೆರೆ: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಇನ್‌ಫಾರ್ಮೇಷನ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದಿಂದ ನ. 11-16ರ ವರೆಗೆ ಅಟಲ್ ಪ್ರಾಯೋಜಿತ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಎಂ ವಿಶ್ವವಿದ್ಯಾಲಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಡಾ. ಟಿ.ಎಂ. ವೀರಗಂಗಾಧರಸ್ವಾಮಿ ಹೇಳಿದರು. ಆರು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳು ಸೈಬರ್ ಭದ್ರತೆ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನವದೆಹಲಿಯ ಎಐಸಿಟಿ ವತಿಯಿಂದ ಕಾರ್ಯಕ್ರಮಕ್ಕೆ 3.5 ಲಕ್ಷ ರೂ. ಬಿಡುಗಡೆಯಾಗಿದ್ದು, ದೇಶದ ವಿವಿಧ ಕಾಲೇಜುಗಳ 40 ಅಧ್ಯಾಪಕರು ಹಾಗೂ ಜಿಎಂಐಟಿ ಕಾಲೇಜಿನ 10 ಅಧ್ಯಾಪಕರು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದರು. ನ. 11ರ ಬೆಳಗ್ಗೆ 9ಕ್ಕೆ ಜಿ.ಎಂ. ಹಾಲಮ್ಮ ಸಭಾಂಗಣದಲ್ಲಿ ಕಾರ್ಯಕ್ರಮದ ಉದ್ಘಾಟನೆ ನೆರವೇರಲಿದೆ ತುಮಕೂರಿನ ಎಸ್‌ಜೆಸಿಐಟಿ ಕಾಲೇಜಿನ ಪ್ರಾಚಾರ್ಯ ಡಾ.ಜಿ.ಟಿ. ರಾಜು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದ ಸಂಯೋಜಕಿ ಸೌಮ್ಯಾ ಎತ್ತಿನಹಳ್ಳಿ, ಟಿ.ಆರ್. ತೇಜಸ್ವಿ ಕಟ್ಟಿಮನಿ ಸುದ್ದಿಗೋಷ್ಠಿಯಲ್ಲಿದ್ದರು.
ಜಿಎಂಐಟಿಯಲ್ಲಿ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ
ಕೂದಲು ಬಿಳಿಯಾಗುವುದನ್ನು ತಡೆಯುವುದೇಗೆ ಎಂಬ ಚಿಂತೆಯೇ?; ಇಲ್ಲಿದೆ ಸಿಂಪಲ್ ವಿಧಾನ | Health Tips
10 ವರ್ಷದಿಂದ 25 ರಿಂದ 30 ರವರೆಗೆ ಇಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಅಕಾಲಿಕ ಬಿಳಿ ಕೂದಲಿನಿಂದ…
ನೀವು ಈ ನಕ್ಷತ್ರದಲ್ಲಿ ಹುಟ್ಟಿದ್ದೀರಾ? ಹಾಗಾದ್ರೆ ಈ ಡಿಸೆಂಬರ್ ತಿಂಗಳಲ್ಲಿ ನಿಮ್ಮ ಅದೃಷ್ಟ ಖುಲಾಯಿಸಲಿದೆ! Birth of Stars
Birth of Stars : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ…
ರಾಗಿಮುದ್ದೆಯಿಂದ ಇಷ್ಟೆಲ್ಲಾ ಪ್ರಯೋಜನ ಇದ್ಯಾ!; ತಿಳಿದ್ರೆ ನಿಮ್ಮ ದೈನಂದಿನ ಆಹಾರಕ್ರಮದಲ್ಲಿ ಮಿಸ್ ಮಾಡೋದೆ ಇಲ್ಲ | Health Tips
ಚಳಿಗಾಲವು ಆರಂಭವಾಗಿದ್ದು ಭವಿಷ್ಯದಲ್ಲಿ ಈ ಬಾರಿ ಹಿಂದಿನ ವರ್ಷಗಳಿಗಿಂತ ತೀವ್ರ ಚಳಿ ಇರುತ್ತದೆ. ಇತ್ತೀಚಿನ ದಿನಗಳಲ್ಲಿ…